ಕುಂಭಮೇಳಕ್ಕೆ​ ತೆರಳುತ್ತಿದ್ದ ​ ವಾಹನ ಅಪಘಾತ: ಗೋಕಾಕದ 6 ಮಂದಿ ಸಾವು

ಬೆಳಗಾವಿ :ಪ್ರಯಾಗರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ(Gokak)ದ ಆರು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಜಬಲಪುರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.
ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗೋಕಾಕ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ ಶೇಡಶ್ಯಾಳೆ (45), ಬಸವರಾಜ ಕುರ್ತಿ (63), ಬಸವರಾಜ ದೊಡಮಾಳ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ಎಂದು ಹೇಳಲಾಗಿದೆ. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳ ಹಿಂದೆ ಗೋಕಾಕಿನಿಂದ ಕ್ರೂಸರ್ ವಾಹನದಲ್ಲಿ ಭಕ್ತರು ಪ್ರಯಾಗರಾಜ್ ಕುಂಭಮೇಳಕ್ಕೆ (Prayagraj Kumbh Mela) ತೆರಳುತ್ತಿದ್ದರು. ಸೋಮವಾರ (ಫೆ.24) ಬೆಳಗಿನ ಜಾವ ಜಬಲಪುರ ಪೆಹರಾ‌ ಟೋಲ್ ನಾಕಾ ಬಳಿ ಕ್ರೂಸರ್​ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ನಂತರ ಬಸ್​ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement