ಭಾರಿ ಹಿಮಪಾತ: ಬಿಆರ್‌ಒ 47 ಕಾರ್ಮಿಕರು ಸಿಲುಕಿರುವ ಶಂಕೆ

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ)ಯ ಕನಿಷ್ಠ 47 ಕಾರ್ಮಿಕರು ಹಿಮದಡಿಯಲ್ಲಿ ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 50ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಮಾನಾದ ಗಡಿ ಪ್ರದೇಶದ ಗಡಿ ರಸ್ತೆಯಲ್ಲಿ ಸಂಸ್ಥೆ ಶಿಬಿರದ ಬಳಿ ಭಾರೀ ಹಿಮಪಾತ ಸಂಭವಿಸಿದೆ. ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಸುಮಾರು 57 ಕಾರ್ಮಿಕರು ಸಿಲುಕಿಕೊಂಡ ಶಂಕೆ ವ್ಯಕ್ತವಾಗಿದ್ದು, ಇವರಲ್ಲಿ 10 ಕಾರ್ಮಿಕರನ್ನು ರಕ್ಷಿಸಿ ಮಾನಾ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಲಾಗಿದೆ” ಎಂದು ಉತ್ತರಾಖಂಡ ಪೊಲೀಸ್ ವಕ್ತಾರ ನೀಲೇಶ ಆನಂದ ಭರ್ನೆ ತಿಳಿಸಿದ್ದಾರೆ.
ನಾಲ್ಕು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ. ಆದರೆ ಭಾರೀ ಹಿಮಪಾತದಿಂದಾಗಿ, ರಕ್ಷಣಾ ತಂಡ ಸ್ಥಳಕ್ಕೆ ತಲುಪಲು ಸಾಕಷ್ಟು ಕಷ್ಟವಾಗುತ್ತಿದೆ ಎಂದು ಬಿಆರ್‌ಒ(ಗಡಿ ರಸ್ತೆ ಸಂಸ್ಥೆ) ಕಾರ್ಯನಿರ್ವಾಹಕ ಎಂಜಿನಿಯರ್ ಸಿ.ಆರ್. ಮೀನಾ ತಿಳಿಸಿದ್ದಾರೆ.
ಉತ್ತರಾಖಂಡದ ಮಾಲಾದಿಂದ ಘಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರಮೋದಿ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಧಾಮಿ ಜೊತೆ ಮಾತನಾಡಿ ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಚಿನ್ನ ಕಳ್ಳಸಾಗಣೆ ಪ್ರಕರಣ : ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ, 10-15 ಬಾರಿ ಕಪಾಳಮೋಕ್ಷ ; ರನ್ಯಾ ರಾವ್ ಆರೋಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement