ಮಾರ್ಚ್‌ 22ರಂದು ಕರ್ನಾಟಕ ಬಂದ್‌

ಬೆಂಗಳೂರು: ಬೆಳಗಾವಿ ಹಾಗೂ ಮರಾಠಿ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ ನಾಗರಾಜ (Vatal Nagaraj) ಅವರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದರ ಭಾಗವಾಗಿ ಮಾ. 3ರಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಹಾಗೂ ಮಾರ್ಚ್‌ 22ರಂದು ಅಖಂಡ ಕರ್ನಾಟಕ ಬಂದ್ (Karnataka Bandh) ಮಾಡುವುದಾಗಿ ಘೋಷಿಸಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ತನ್ನ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮಾರ್ಚ್‌ 22ರಂದು ಅಖಂಡ ಕರ್ನಾಟಕ ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮಾರ್ಚ್‌ 3ರಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು, ಮಾರ್ಚ್‌ 7ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದೆ. ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಅಲ್ಲದೆ ಮಾ. 11ರಂದು ಮೇಕೆದಾಟು ಯೋಜನೆ ಆಗ್ರಹಿಸಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್, ಮಾ. 14ರಂದು ರಾಮನಗರ ಮಂಡ್ಯ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಮತ್ತು ಮಾ.17ರಂದು ಹೊಸಕೋಟೆ – ಚೆನ್ನೈ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಾರಾ ಗೋವಿಂದು, ಕರವೇ ಪ್ರವೀಣ ಶೆಟ್ಟಿ, ಜಯ ಕರ್ನಾಟಕ ರಾಜ್ಯಾಧ್ಯಕ್ಷ ಜಗದೀಶ, ರೂಪೇಶ್ ರಾಜಣ್ಣ ಸೇರಿ ಅನೇಕ ಕನ್ನಡಪರ ಹೋರಾಟಗಾರರು ಭಾಗವಹಿಸಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement