ಮಾರ್ಚ್ ಮಧ್ಯದ ವೇಳೆಗೆ ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆ ; ಈ ಬಾರಿ ಮಹಿಳೆಗೆ ಸಾರಥ್ಯ…?

ನವದೆಹಲಿ : 13 ರಾಜ್ಯಗಳಲ್ಲಿ ಸಾಂಸ್ಥಿಕ ಚುನಾವಣೆಗಳು ಮುಗಿದ ನಂತರ ಮಾರ್ಚ್ ಮಧ್ಯದ ವೇಳೆಗೆ 15 ಅಥವಾ 16 ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ.
ಜೆಪಿ ನಡ್ಡಾ ಅವರ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಯು ಒಮ್ಮತದಿಂದ ನಡೆಯಲಿದೆ ಎಂದು ಪಕ್ಷದ ಮೂಲಗಳು ಸೂಚಿಸುತ್ತವೆ.
ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದಕ್ಷಿಣ ಭಾರತದ ಮಹಿಳೆಯನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವುದನ್ನೂ ಪಕ್ಷವು ಪರಿಗಣಿಸುತ್ತಿದೆ ಎಂದು ಬಿಜೆಪಿಯ ಹಿರಿಯ ಪದಾಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳೆಯನ್ನೇ ಆಯ್ಕೆ ಮಾಡಲು ಒಲವು ತೋರಿದರೆ ಆಂಧ್ರಪ್ರದೇಶ ಬಿಜೆಪಿ ಮುಖ್ಯಸ್ಥೆ ದಗ್ಗುಬಾಟಿ ಪುರಂದೇಶ್ವರಿ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್ ಅವರು ಪ್ರಮುಖ ಸ್ಪರ್ಧಿಗಳಾಗಿ ಹೊರಹೊಮ್ಮಬಹುದಾಗಿದೆ.

ಕಾಂಗ್ರೆಸ್ ತೊರೆದು 2014ರಲ್ಲಿ ಬಿಜೆಪಿ ಸೇರಿದ್ದ 66 ವರ್ಷದ ಪುರಂದೇಶ್ವರಿ ಸಂಘಟನೆಯಲ್ಲಿ ಅನುಭವಿ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಅವರು ಪ್ರಸ್ತುತ ಆಂಧ್ರಪ್ರದೇಶದ ಬಿಜೆಪಿಯ ಮುಖ್ಯಸ್ಥರಾಗಿದ್ದಾರೆ ಮತ್ತು ಅವರ ಅದ್ಭುತ ವಾಗ್ಮಿ ಹಾಗೂ ಕೌಶಲ್ಯಕ್ಕೆ ಹೆಸರುವಾಸಿಯಾಗಿದ್ದಾರೆ, ಅವರನ್ನು ‘ದಕ್ಷಿಣದ ಸುಷ್ಮಾ ಸ್ವರಾಜ್’ ಎಂದೇ ಬಿಜೆಪಿಯಲ್ಲಿ ಕರೆಯಲಾಗುತ್ತದೆ.
ಕೊಯಮತ್ತೂರಿನ ಶಾಸಕಿ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್ ಪಕ್ಷದೊಳಗೆ ವಿಶ್ವಾಸಾರ್ಹ ನಾಯಕರಾಗಿ ಪರಿಗಣಿಸಲ್ಪಟ್ಟಿದ್ದಾರೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ | ಅಮೃತಸರದ ಗೋಲ್ಡನ್​ ಟೆಂಪಲ್ ಮೇಲೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನ; ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ

ಪ್ರಾದೇಶಿಕ ಪ್ರಾತಿನಿಧ್ಯ, ಜಾತಿ ಡೈನಾಮಿಕ್ಸ್ ಮತ್ತು ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಗುಜರಾತಿನಂತಹ ರಾಜ್ಯಗಳಲ್ಲಿ ಮುಂಬರುವ ಚುನಾವಣೆಗಳು ಸೇರಿದಂತೆ ಇತರ ಅಂಶಗಳನ್ನು ಸಹ ಬಿಜೆಪಿ ಪರಿಗಣಿಸುತ್ತಿದೆ. ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದೆ ಎಂದು ವರದಿಯಾಗಿದೆ, ಆದರೂ ಒಮ್ಮತದ ಮೂಲಕ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ.
ಇತರ ಸಂಭಾವ್ಯ ಅಭ್ಯರ್ಥಿಗಳಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ (55), ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದರ್ ಯಾದವ್ (55), ಮತ್ತು ಹಿರಿಯ ನಾಯಕ ವಿನೋದ್ ತಾವ್ಡೆ (61) ಹಾಗೂ ಅನುರಾಗ ಠಾಕೂರ್‌ ಅವರ ಹೆಸರು ಸಹ ಕೇಳಿಬರುತ್ತಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement