ಡಿಕೆ ಶಿವಕುಮಾರ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ

ಉಡುಪಿ : ಡಿಕೆ ಶಿವಕುಮಾರ ಅವರಿಗೆ ಮೊದಲ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಇವತ್ತು ಅವರು ಯಶಸ್ವಿ ನಾಯಕರಾಗಿ ಬೆಳೆದಿದ್ದಾರೆ. ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಮ್ಮುಖದಲ್ಲಿಯೇ ಈ ಹೇಳಿಕೆ ನೀಡಿದ್ದಾರೆ. ಡಿ.ಕೆ ಶಿವಕುಮಾರ ಮುಖ್ಯಮಂತ್ರಿ ಆಗುವುದು ತೀರ್ಮಾನ ಆಗಿರುವ ವಿಷಯ ಎಂದು ಹೇಳಿದ ಅವರು, ನಿಮ್ಮ ವಿರುದ್ಧ ಹೇಳಿಕೆಗಳು ಬರುತ್ತದೆ, ಹೋಗುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಶಿವಕುಮಾರಗೆ ಸಲಹೆ ನೀಡಿದ್ದಾರೆ.
ಡಿಕೆ ಶಿವಕುಮಾರ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಈ ಬಗ್ಗೆ ಯಾರೂ ಕೂಡ ಆತಂಕ ಪಡಬೇಕಾಗಿಲ್ಲ. ಮುಖ್ಯಮಂತ್ರಿ ಹುದ್ದೆ ಡಿ.ಕೆ ಶಿವಕುಮಾರ​​​ ಅವರಿಗೆ ಯಾರೂ ಕೊಡುವ ವರ ಅಲ್ಲ. ಅದು ಸಂಪಾದನೆ ಮಾಡಿರುವ ಶಕ್ತಿ. ಈ ಪುಣ್ಯ ಭೂವಿಯಲ್ಲಿ ಆಡಿದ ಮಾತು ನೂರಕ್ಕೆ ನೂರು ನಿಜವಾಗಲಿದೆ. ಯಾರೇ ಪ್ರಯತ್ನ ಮಾಡಿದರೂ ಶಿವಕುಮಾರಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಸಾಧ್ಯವಿಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಬೆಳಗಾವಿ | ಕಾರಿನ ಮೇಲೆ ಮಗುಚಿ ಬಿದ್ದ ಲಾರಿ ; ಇಬ್ಬರಿಗೆ ಗಾಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement