ಕೋಲಾರ | ಇನ್ನೋವಾ ಕಾರು-ಬೈಕ್‌ ಡಿಕ್ಕಿ; ಮಗು ಸೇರಿ ನಾಲ್ವರು ಸಾವು

ಕೋಲಾರ: ಇನ್ನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ನಾಲ್ವರು ಸಾವಿಗೀಡಾದ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ – ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಅಪಗಾತದಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ.
ಮಹೇಶ (45), ಉದ್ವಿತಾ (3), ರತ್ನಮ್ಮ (60) ಹಾಗೂ ಬೈಕ್ ಸವಾರ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಶ್ಮಿತಾ, ವಿರಾಟ್, ಸುಜಾತಾ ಹಾಗೂ ಕಾರು ಚಾಲಕ ಅರುಣ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಸುಶ್ಮಿತಾ ತುಂಬು ಗರ್ಭಿಣಿಯಾಗಿದ್ದು, ಅಪಘಾತದಲ್ಲಿ ಆಕೆಯ ಹೊಟ್ಟೆಯಲ್ಲಿದ್ದ ಭ್ರೂಣವು ಮೃತಪಟ್ಟಿದೆ ಎನ್ನಲಾಗಿದೆ. ಅಪಘಾತದ ಭೀಕರತೆಗೆ ಇನ್ನೋವಾ ಕಾರು ಮತ್ತು ಬೈಕ್ ನಜ್ಜುಗುಜ್ಜಾಗಿವೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವು ಬೆಂಗಳೂರಿನ ಆಸ್ಪತ್ರೆಯಲ್ಲಿದ್ದ ಸಂಬಂಧಿಕರೊಬ್ಬರ ಯೋಗಕ್ಷೇಮ ವಿಚಾರಿಸಿಕೊಂಡು ಬರಲು ಕಾರಿನಲ್ಲಿ ತೆರಳಿದ್ದರು. ವಾಪಸ್ ಊರಿಗೆ ಬರುವ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement