ಸಿಎಂ ಯಾರೆಂದು ನಿರ್ಧರಿಸುವುದು ಹೈಕಮಾಂಡ್‌ ; ಸಿದ್ದರಾಮಯ್ಯ

ಬೆಂಗಳೂರು: ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ಈ ಬಗ್ಗೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ.. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ ಎಂದು ಹೇಳಿದ್ದಾರೆ.
ಮೊಯ್ಲಿ ಅಥವಾ ಬೇರೆ ಯಾರೋ ಹೇಳಿದರೆ ಯಾರೂ ಮುಖ್ಯಮಂತ್ರಿ ಆಗುವುದಿಲ್ಲ. ಅದು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವ ವಿಷಯ ಹಾಗೂ ನಿರ್ಧಾರ ತೆಗೆದುಕೊಳ್ಳುವ ವಿಷಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ವೇಳೆ ಗುತ್ತಿದಾರರ ಬಾಕಿ ಬಿಲ್ ಬಗ್ಗೆ ಮಾತನಾಡಿದ ಅವರು, ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಏಪ್ರಿಲ್ ತಿಂಗಳಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು ಎಂದರು. ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ನಾನು ಇದುವರೆಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲ ಎಂದು ಹೇಳಿದರು.

ಪ್ರಮುಖ ಸುದ್ದಿ :-   ವಿಡಿಯೊ | ನೀಟ್ ಜಟಾಪಟಿ : ಬಿಜೆಪಿಯಿಂದ ಕೆಪಿಸಿಸಿ ಕಚೇರಿ ಮುತ್ತಿಗೆ ಯತ್ನ; ಬಿಜೆಪಿ ಶಾಸಕ ಬಿಪಿ ಹರೀಶ ಮೇಲೆ ಮೊಟ್ಟೆ ಎಸೆತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement