ಮಂಗಳೂರಲ್ಲಿ ವ್ಯಕ್ತಿ ಆತ್ಮಹತ್ಯೆ ; ಮಹಿಳಾ ಸಿಐಎಸ್ಎಫ್ ಅಧಿಕಾರಿ ವಿರುದ್ಧ ಶೋಷಣೆ ಆರೋಪ

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯಿಂದ ವಂಚನೆ ಮತ್ತು ಶೋಷಣೆಗೆ ಒಳಗಾಗಿದ್ದೇನೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಜೀವನವನ್ನೇ ಕೊನೆಗೊಳಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿಷೇಕ ಸಿಂಗ್ (40) ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 20 ನಿಮಿಷಗಳ ವೀಡಿಯೊ ರೆಕಾರ್ಡ್ ಮಾಡಿ, ತನ್ನ ಸಾವಿಗೆ ಮಹಿಳೆಯೇ ಕಾರಣ ಎಂದು ಆರೋಪಿಸಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ್ದಾರೆ.
ಸಿಐಎಸ್ಎಫ್ ಅಸಿಸ್ಟೆಂಟ್ ಕಮಾಂಡೆಂಟ್ ಮೋನಿಕಾ ಸಿಹಾಗ್ ತನ್ನನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ. ಆಕೆ ತನ್ನ ವೈವಾಹಿಕ ಸ್ಥಿತಿಯನ್ನು ಮುಚ್ಚಿಟ್ಟು, ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ತನ್ನೊಂದಿಗೆ ಸಂಬಂಧ ಬೆಳೆಸಿದ್ದಾಳೆ ಎಂದು ಆರೋಪಿಸಿದ್ದಾರೆ.

ತನ್ನಿಂದ ಭಾವನಾತ್ಮಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ಲಾಭ ಪಡೆದು ತನ್ನಿಂದ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಪಡೆದಿದ್ದಾಳೆ ಎಂದು ಆರೋಪಿಸಿದ್ದಾರೆ. ಅವಳು ಅನೇಕ ಜನರೊಂದಿಗೆ ಇದೇ ರೀತಿಯ ಸಂಬಂಧವನ್ನು ಹೊಂದಿದ್ದಳು ಎಂದು ಅವರು ಆರೋಪಿಸಿದ್ದಾರೆ.
ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಿಂಗ್‌, ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಸಹೋದ್ಯೋಗಿಗಳೊಂದಿಗೆ ಮಂಗಳೂರಿಗೆ ಬಂದಿದ್ದರು. ಅವರು ಲಾಡ್ಜ್‌ನಲ್ಲಿ ತಂಗಿದ್ದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವರ ಸಾವಿನ ಸುತ್ತಲಿನ ಸನ್ನಿವೇಶಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಘಟನೆ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಬೆಳಗಾವಿ | ಕಾರಿನ ಮೇಲೆ ಮಗುಚಿ ಬಿದ್ದ ಲಾರಿ ; ಇಬ್ಬರಿಗೆ ಗಾಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement