ಉಡುಪಿ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕಾಪು ಕ್ಷೇತ್ರದಲ್ಲಿ ಬಹುಕೋಟಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿರುವ ಮಾರಿಯಮ್ಮನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಭೇಟಿ ನೀಡಿ ದರ್ಶನ ಪಡೆದ ನಂತರ ಸಾರ್ವಜನಿಕ ಸಭೆಯಲ್ಲಿ ಕಂಗನಾ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು ದೇವಸ್ಥಾನಗಳು ನಮ್ಮ ಸಂಸ್ಕೃತಿಯಾಗಿದೆ. ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಹಣ ದೇವಸ್ಥಾನಗಳು ಬಳಸುವಂತಾಗಬೇಕು ಎಂದರು. ಈ ಮೂಲಕ ಅದು ಜನರ ಸೇವೆಗೆ ಉಪಯೋಗವಾಗಬೇಕು ಎಂದರು. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಉಪಸ್ಥಿತರಿದ್ದರು.
ಭಾರತದ ಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ ಯಾದವ ಅವರು ತಮ್ಮ ಪತ್ನಿ ದೇವಿಷಾ ಶೆಟ್ಟಿ ಅವರೊಂದಿಗೆ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದರು. ಈ ವೇಳೆ ದೇವಸ್ಥಾನದ ಅಭಿವೃದ್ಧಿಯ ಭಾಗವಾಗಿ ಒಂದು ಕಂಬವನ್ನು ಸಹ ನೀಡಿದ್ದರು. ಅವರ ಪತ್ನಿ ದೇವಿಷಾ ಶೆಟ್ಟಿ ಕರ್ನಾಟಕದ ಕರಾವಳಿ ಮೂಲದವರಾಗಿದ್ದಾರೆ.
ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ತನ್ನ ಇಬ್ಬರು ಮಕ್ಕಳು, ತಾಯಿ ಮತ್ತು ಸಹೋದರಿ, ನಟಿ ಶಮಿತಾ ಶೆಟ್ಟಿ ಜೊತೆಗೆ ಶನಿವಾರ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಭೇಟಿ ಬಳಿಕ ಉಡುಪಿ ಜಿಲ್ಲೆಗೆ ಆಮಿಸಿದ ಶಿಲ್ಪಾ ಶೆಟ್ಟಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಾಪು ಮಾರಿಗುಡಿಗೆ ಭೇಟಿ ನೀಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ