ಖ್ಯಾತ ಹಿನ್ನೆಲೆ ಗಾಯಕಿ ಕಲ್ಪನಾ ರಾಘವೇಂದ್ರ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಹೈದರಾಬಾದ್‌ : ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಹಾಗೂ ಗಾಯಕ ಟಿ.ಎಸ್.ರಾಘವೇಂದ್ರ ಅವರ ಪುತ್ರಿ ಕಲ್ಪನಾ ರಾಘವೇಂದ್ರ ಅವರು ಹೈದರಾಬಾದ್‌ನ ತಮ್ಮ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಕಲ್ಪನಾ ರಾಘವೇಂದ್ರ ಅವರು ಆತ್ಮಹತ್ಯೆಗೆ ಯತ್ನಿಸಿದ ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ವರದಿಗಳ ಪ್ರಕಾರ, ಆಕೆ ಹೈದರಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ನಿದ್ರೆ ಮಾತ್ರೆಗಳನ್ನು ಸೇವನೆ ಮಾಡಿದ್ದರು ಎಂದು ಹೇಳಲಾಗಿದೆ.
ಎರಡು ದಿನಗಳ ಕಾಲ ಆಕೆಯ ಮನೆಯ ಬಾಗಿಲು ಮುಚ್ಚಿದ್ದರಿಂದ ಆಕೆಯ ಅಪಾರ್ಟ್‌ಮೆಂಟ್‌ನ ಭದ್ರತಾ ಸಿಬ್ಬಂದಿ ಆತಂಕಗೊಂಡರು. ಅಪಾರ್ಟ್‌ಮೆಂಟ್‌ ನಿವಾಸಿಗಳ ಸಂಘದವರು ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಉತ್ತರ ಸಿಗಲಿಲ್ಲ. ನಂತರ ಸಂಘದವರು ಪತಿಗೆ ಆಕೆಯ ಪತಿಗೆ ಕರೆ ಮಾಡಿದ್ದಾರೆ. ಆದರೆ ಅವರು ಚೆನ್ನೈನಲ್ಲಿದ್ದರು ಮತ್ತು ಕಲ್ಪನಾ ಅವರನ್ನು ಸಂಪರ್ಕ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ನಂತರ ಸಂಘದ ಸದಸ್ಯರು ಪೊಲೀಸರಿಗೆ ಕರೆ ಮಾಡಿದ್ದಾರೆ, ತಕ್ಷಣವೇ ಆಗಮಿಸಿದ ಪೊಲೀಸರು ಆಕೆಯ ಮನೆಯ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಕಲ್ಪನಾ ರಾಘವೇಂದ್ರ ಅವರು ಪ್ರಜ್ಞಾಹೀನ ಸ್ಥತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕಲ್ಪನಾ ಅವರ ಪತಿ ಚೆನ್ನೈನಿಂದ ಬಂದಿದ್ದಾರೆ. ಕಲ್ಪನಾ ರಾಘವೇಂದ್ರ ಅವರು ಐಸಿಯುವಿನಲ್ಲಿ ವೆಂಟಿಲೇಟರ್ ಸಪೋರ್ಟ್‌ನಲ್ಲಿದ್ದಾರೆ ಎಂದು ಅವರು ಹೇಳಿದರು. ಕಲ್ಪನಾ  ಅವರ ಆತ್ಮಹತ್ಯೆ ಯತ್ನದ ಹಿಂದಿನ ನಿಖರವಾದ ಕಾರಣ ತಿಳಿದುಬಂದಿಲ್ಲ.
ಕಲ್ಪನಾ ರಾಘವೇಂದ್ರ ಯಾರು?
ಕಲ್ಪನಾ ಅವರು ಗಾಯಕ ಟಿ.ಎಸ್. ರಾಘವೇಂದ್ರ ಅವರ ಮಗಳು ಮತ್ತು ಅವರು ಹಲವಾರು ವರ್ಷಗಳಿಂದ ಅನೇಕ ಗಾಯನ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು 2010 ರಲ್ಲಿ ಮಲಯಾಳಂನ ಸ್ಟಾರ್ ಸಿಂಗರ್ ಪ್ರಶಸ್ತಿ ಗೆದ್ದ ನಂತರ ಪ್ರಸಿದ್ಧಿಗೆ ಬಂದರು. ಅವರು ಕೇವಲ ಐದು ವರ್ಷದವರಾಗಿದ್ದಾಗ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ವಿವಿಧ ಭಾಷೆಗಳಲ್ಲಿ 1,500 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರು ಎಂ.ಎಸ್. ವಿಶ್ವನಾಥನ್, ಇಳಯರಾಜ, ಎ. ರೆಹಮಾನ್, ಕೆ.ವಿ. ಮಹದೇವನ್, ಎಸ್ಪಿ ಬಾಲಸುಬ್ರಹ್ಮಣ್ಯಂ ಮತ್ತು ಕೆಎಸ್ ಚಿತ್ರಾ ಅವರಂತಹ ಪ್ರಸಿದ್ಧ ಸಂಗೀತ ಸಂಯೋಜಕರು ಮತ್ತು ಗಾಯಕರೊಂದಿಗೆ ಅವರು ಕೆಲಸ ಮಾಡಿದ್ದಾರೆ.
ಕಲ್ಪನಾ ಅವರು ವಿವಿಧ ಸಂಗೀತ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿದ್ದಾರೆ ಮತ್ತು ಜೂನಿಯರ್ ಎನ್‌ಟಿಆರ್‌ ಹೋಸ್ಟ್ ಮಾಡಿದ ಬಿಗ್ ಬಾಸ್ ತೆಲುಗು ಸೀಸನ್ 1 ನಲ್ಲಿ ಭಾಗವಹಿಸಿದ್ದಾರೆ.

ಪ್ರಮುಖ ಸುದ್ದಿ :-   ಚಿನ್ನ ಕಳ್ಳಸಾಗಣೆ ಪ್ರಕರಣ : ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ, 10-15 ಬಾರಿ ಕಪಾಳಮೋಕ್ಷ ; ರನ್ಯಾ ರಾವ್ ಆರೋಪ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement