ಬೆಳಗಾವಿ | ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಶಾರದಾ ಡಾಲೆ(38), ಅನುಷಾ (10), ಅಮೃತಾ (14), ಆದರ್ಶ (8) ಎಂದು ಗುರುತಿಸಲಾಗಿದೆ. ಅನುಷಾ ಡಾಳೆ ಎಂಬ ಮಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.
ಶಾರದಾ ಪತಿ ಪ್ರತಿದಿನ ಕುಡಿದುಬಂದು ಗಲಾಟೆ ಮಾಡುತ್ತಿದ್ದ, ಹೊಡೆಯುವುದು, ಬಡಿಯುವುದನ್ನು ಮಾಡುತ್ತಿದ್ದ. ಇದರಿಂದ ಮನನೊಂದು ಶಾರದಾ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಚಿವರು, ಶಾಸಕರ ವೇತನ ದ್ವಿಗುಣ ಸಾಧ್ಯತೆ : ವೇತನ. ಭತ್ಯೆ ಹೆಚ್ಚಳಕ್ಕೆ ತಿದ್ದುಪಡಿ ಮಸೂದೆ ಸಿದ್ಧ

ನಿಮ್ಮ ಕಾಮೆಂಟ್ ಬರೆಯಿರಿ

advertisement