ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಹೊಸನಗರದ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮಿ ಅವರ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರದ್ದುಪಡಿಸಿದೆ.
ರಾಘವೇಶ್ವರ ಭಾರತೀ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ 2024ರ ಜೂನ್‌ 11ರಂದು ಕಾಯ್ದಿರಿಸಿದ್ದ ಆದೇಶವನ್ನು ಸುಮಾರು ಎಂಟು ತಿಂಗಳ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಶುಕ್ರವಾರ ಪ್ರಕಟಿಸಿದೆ.
“ಅರ್ಜಿಯನ್ನು ಪುರಸ್ಕರಿಸಲಾಗಿದ್ದು, ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕ್ರಿಯೆ ವಜಾಗೊಳಿಸಲಾಗಿದೆ” ಎಂದು ನ್ಯಾಯಾಲಯ ಆದೇಶಿಸಿತು.
ಶ್ರೀರಾಮಚಂದ್ರಪುರ ಮಠ ಮತ್ತು ಬೆಂಗಳೂರಿನ ಗಿರಿನಗರದಲ್ಲಿ ತಮ್ಮ ಮೇಲೆ ರಾಘವೇಶ್ವರ ಭಾರತೀ ಶ್ರೀ ಅವರು ಅತ್ಯಾಚಾರ ಎಸಗಿದ್ದರು ಎಂದು 29.08.2015ರಂದು ಸಂತ್ರಸ್ತೆಯು ಬೆಂಗಳೂರಿನ ಗಿರಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ತನಿಖೆ ನಡೆಸಿದ್ದ ಸಿಐಡಿಯ ವಿಶೇಷ ತನಿಖಾ ದಳವು ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ದೂರು ಮತ್ತು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ರಾಘವೇಶ್ವರ ಭಾರತೀ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದು ದುರುದ್ದೇಶದಿಂದ ನೀಡಿದ ಸುಳ್ಳು ದೂರು. ವೈಯಕ್ತಿಕ ವೈವಾಹಿಕ ಸಮಸ್ಯೆಯಿಂದಾಗಿ ಮಹಿಳೆ ಸುಳ್ಳು ಅತ್ಯಾಚಾರದ ದೂರು ನೀಡಿದ್ದಾರೆ ಎಂದು ಶ್ರೀಗಳ ಪರ ವಕೀಲ ಪಿ.ಎನ್. ಮನಮೋಹನ ನ್ಯಾಯಾಲಯದಲ್ಲಿ ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ನ್ಯಾಯಾಲಯವು ಪ್ರಕರಣ ರದ್ದುಪಡಿಸಿ ಆದೇಶಿಸಿದೆ.
2006ರಲ್ಲಿ ಮಠದಲ್ಲಿ 10ನೇ ತರಗತಿ ಓದುತ್ತಿರುವಾಗ ಚಾತುರ್ಮಾಸ ನಡೆಯುತ್ತಿದ್ದಾಗ ಬೆಂಗಳೂರಿನ ಗಿರಿನಗರದಲ್ಲಿ ತಾವು ತಂಗಿದ್ದ ಕೊಠಡಿಗೆ ಕರೆಸಿಕೊಂಡು ಸ್ವಾಮೀಜಿ ತನ್ನ ಮೇಲೆ  ಅತ್ಯಾಚಾರ ಎಸಗಿದ್ದರು ಎಂದು 29-08-2015ರಂದು ಸಂತ್ರಸ್ತೆಯು ಬೆಂಗಳೂರಿನ ಗಿರಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ತನಿಖೆ ನಡೆಸಿದ್ದ ಸಿಐಡಿಯ ವಿಶೇಷ ತನಿಖಾ ದಳವು 7 ಸೆಪ್ಟೆಂಬರ್‌ 2018ರ ಸೆ.7ರಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಹೀಗಾಗಿ ದೂರು ಮತ್ತು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ರಾಘವೇಶ್ವರ ಸ್ವಾಮೀಜಿ ಹೈಕೋರ್ಟ್‌ಗೆ ಕೋರಿದ್ದರು. ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತ್ರಸ್ತೆಯ ಪತಿ ಮಂಜುನಾಥ್‌ ಹೆಬ್ಬಾರ್‌ ವಿರುದ್ದ ಐಪಿಸಿ ಸೆಕ್ಷನ್‌ 323, 376, 376(2)(f)(i)(n), 498ಎ ಮತ್ತು 109 ಅಡಿ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ 13 ಡಿಸೆಂಬರ್‌ 2021ರಂದು ರದ್ದುಪಡಿಸಿತ್ತು. .

ಪ್ರಮುಖ ಸುದ್ದಿ :-   ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement