14 ವರ್ಷದ ಬಾಲಕಿಗೆ ಬಾಲ್ಯ ವಿವಾಹ; ತಪ್ಪಿಸಿಕೊಳ್ಳಲು ಯತ್ನಿಸಿದ್ದಕ್ಕೆ ಆಕೆಯನ್ನು ಹೊತ್ತೊಯ್ದ ವೀಡಿಯೊ ವೈರಲ್‌…!

ಕರ್ನಾಟಕದ ಗಡಿ ಭಾಗದಲ್ಲಿರುವ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದ ಬಾಲ್ಯವಿವಾಹ ಪ್ರಕರಣದಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಹೊತ್ತೊಯ್ದ ಘಟನೆ ವರದಿಯಾಗಿದೆ.
ಆಕೆ ಕೂಗಿಕೊಂಡರೂ ಆಕೆಯನ್ನು ಬಲವಂತವಾಗಿ ಹೊತ್ತೊಯ್ದಿರುವ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಕ್ರಮ ವಿವಾಹದಲ್ಲಿ ಭಾಗಿಯಾಗಿದ್ದ ಯುವತಿಯ ಪೋಷಕರು, ಪತಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
14 ವರ್ಷದ ಸಂತ್ರಸ್ತ ಬಾಲಕಿ 7ನೇ ತರಗತಿ ನಂತರ ಶಾಲೆ ಬಿಟ್ಟಿದ್ದಳು. ಆಕೆಯ ಇಚ್ಛೆಗೆ ವಿರುದ್ಧವಾಗಿ ಕಲಿಕುಟ್ಟೈನ ಮಾತೇಶ (30) ಎಂಬಾತನಿಗೆ ಮದುವೆ ಮಾಡಲಾಗಿತ್ತು. ಫೆಬ್ರವರಿ 3 ರಂದು ಬೆಂಗಳೂರಿನಲ್ಲಿ ಮದುವೆ ನಡೆದಿದೆ ಎಂದು ಹೇಳಲಾಗಿದ್ದು, ಮದುವೆಯ ನಂತರ ಆಕೆಯನ್ನು ಮಾತೇಶ ಮನೆಗೆ ಕರೆದುಕೊಂಡು ಹೋಗಲಾಗಿತ್ತು.

ಮದುವೆಗೆ ಪದೇ ಪದೇ ಆಕ್ಷೇಪ ವ್ಯಕ್ತಪಡಿಸಿದ್ದ ಬಾಲಕಿ ಯಾರೂ ಇಲ್ಲದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಆಕೆಯ ಇಲ್ಲದ್ದನ್ನು ಕಂಡು, ಮನೆಯವರು ಅವಳನ್ನು ಹುಡುಕಿ ಪತ್ತೆ ಮಾಡಿದರು. ಆಕೆ ಹಿಂತಿರುಗಲು ನಿರಾಕರಿಸಿ ಸಹಾಯಕ್ಕಾಗಿ ಕೂಗಿಕೊಂಡಾಗ ಮಾತೇಶ ಬಲವಂತವಾಗಿ ಆಕೆಯನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದನ್ನು ಸ್ಥಳೀಯರು ಸೆರೆ ಹಿಡಿದಿದ್ದಾರೆ. ಈಗ ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಇದರ ಬೆನ್ನಿಗೇ ಬಾಲ್ಯ ವಿವಾಹ ಮಾಡಿದ್ದಕ್ಕೆ ವ್ಯಾಪಕ ಖಂಡನೆ ಸಹ ವ್ಯಕ್ತವಾಗಿದೆ.
ಸ್ಥಳೀಯ ನಿವಾಸಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ದೂರಿನ ಮೇರೆಗೆ ತೆಂಕಣಿಕೋಟೆಯ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮಾರ್ಚ್ 5 ರಂದು ಪೊಲೀಸರು ಬಾಲಕಿಯ ತಾಯಿ ನಾಗಮ್ಮ, ಆಕೆಯ ಪತಿ ಮಾತೇಶ ಮತ್ತು ಆತನ ಸಹೋದರ ಮಲ್ಲೇಶ ೆಂಬವರನ್ನು ಬಂಧಿಸಿದ್ದರು. ನಂತರ ಅವರನ್ನು ಸೇಲಂ ಜೈಲಿಗೆ ಕಳುಹಿಸಲಾಯಿತು.
ಹೆಚ್ಚಿನ ತನಿಖೆಗಳು ಮಾರ್ಚ್ 6 ರಂದು ಹುಡುಗಿಯ ಅತ್ತಿಗೆ ಮುನಿಯಮ್ಮಲ್ ಮತ್ತು ಆಕೆಯ ತಂದೆ ಮುನಿಯಪ್ಪನ ಎಂಬವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
5000 ಜನಸಂಖ್ಯೆಯನ್ನು ಹೊಂದಿರುವ ಹೊಸೂರು ಸಮೀಪದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಮತ್ತು ಹೊಸೂರು ಸಮೀಪದ ಗುಡ್ಡಗಾಡು ಗ್ರಾಮಗಳಾದ ಒಣ್ಣೆಪುರಂ, ಸಿದ್ದಪ್ಪನೂರು, ಚಿಕ್ಕಮಂಜಿ, ಮತ್ತು ಕಿರಿಯನೂರು ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ನಿರಂತರ ಜಾಗೃತಿ ಅಭಿಯಾನಗಳ ಹೊರತಾಗಿಯೂ ಈ ಪ್ರದೇಶಗಳಲ್ಲಿ ಬಾಲ್ಯ ವಿವಾಹಗಳು ಇನ್ನೂ ಪ್ರಚಲಿತವಾಗಿದೆ ಎಂದು ವರದಿಗಳು ಸೂಚಿಸುತ್ತವೆ.

ಪ್ರಮುಖ ಸುದ್ದಿ :-   ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement