ಚಿನ್ನ ಕಳ್ಳ ಸಾಗಣೆ ಪ್ರಕರಣ: ರನ್ಯಾ ರಾವ್‌ ಗೆ ಮಾರ್ಚ್‌ 24ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು : ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಅಲಿಯಾಸ್‌ ಹರ್ಷವರ್ದಿನಿ ರನ್ಯಾ ಅವರನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಸೋಮವಾರ 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಮೂರು ದಿನಗಳ ಕಸ್ಟಡಿ ಅವಧಿಯು ಸೋಮವಾರ ಮುಗಿದ ಹಿನ್ನೆಲೆಯಲ್ಲಿ ಆಕೆಯನ್ನು ಅಧಿಕಾರಿಗಳು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶ್ವನಾಥ ಚನ್ನಬಸಪ್ಪ ಗೌಡರ ಅವರ ಮುಂದೆ ಹಾಜರುಪಡಿಸಿದರು. ತನಿಖಾಧಿಕಾರಿಗಳಿಂದ ಮಾಹಿತಿ ಪಡೆದ ನ್ಯಾಯಾಧೀಶರು ರನ್ಯಾರನ್ನು ಮಾರ್ಚ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಮಾರ್ಚ್‌ 7ರಂದು ನ್ಯಾಯಾಲಯವು ರನ್ಯಾರನ್ನು ಮೂರು ದಿನ ಡಿಆರ್‌ಐ ಕಸ್ಟಡಿಗೆ ನೀಡಿತ್ತು.
ಈ ಮಧ್ಯೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್‌ ಸ್ನೇಹಿತ ಎನ್ನಲಾದ ಸ್ಟಾರ್‌ ಹೋಟೆಲ್‌ ಮಾಲೀಕರೊಬ್ಬರ ಮೊಮ್ಮಗ ತರುಣ ರಾಜ ಎಂಬಾತನನ್ನು ಡಿಆರ್‌ಐ ಅಧಿಕಾರಿಗಳು ಐದು ದಿನ (ಮಾರ್ಚ್‌ 15ರವರೆಗೆ) ಕಸ್ಟಡಿಗೆ ಪಡೆದಿದ್ದಾರೆ.
ಬಂಧಿತ ತರುಣನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

ಪ್ರಮುಖ ಸುದ್ದಿ :-   ಅಪರಿಚಿತ ಬಂದೂಕುಧಾರಿಗಳಿಂದ ಪಾಕಿಸ್ತಾನದಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆ' ; ಕ್ಯಾಮೆರಾ ಮುಂದೆಯೇ ಉಗ್ರನ ಒಪ್ಪಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement