ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರು: ಬಿಸಿಲ ಧಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಕೊನೆಗೂ ಮಳೆಯಾಗಿದ್ದು, ಮಂಗಳವಾರ ಸಂಜೆ ಮಳೆ ಸುರಿದಿದೆ. ಮಾರ್ಚ್ ತಿಂಗಳ ಮೊದಲ ಮಳೆಯಾಗಿದ್ದು, ನಗರದ ತಾಪಮಾನ ಇಳಿಕೆಯಾಗಿದೆ.
ಮಂಗಳವಾರ ಸಂಜೆ 6 ಗಂಟೆ ಹೊತ್ತಿಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಕಾರ್ಪೊರೇಷನ್, ರಿಚ್ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್​, ಹಲಸೂರು, ಇಂದಿರಾನಗರ, ಬನಶಂಕರಿ, ಜಯನಗ ಸೇರಿದಂತೆ ಹಲವೆಡೆ ಮಳೆಯಾಗಿದೆ. ಬೆಂಗಳೂರಿನ ಎಚ್‌ಎಎಲ್‌ (HAL), ಮಾರತಹಳ್ಳಿ, ವೈಟ್‌ಫೀಲ್ಡ್‌, ರಿಚ್ಮಂಡ್ ಸರ್ಕಲ್ ಮೊದಲಾದೆಡೆ ಮಳೆಯಾಗಿದೆ.
ಹವಾಮಾನ ಇಲಾಖೆ ರಾಜ್ಯದ ಹಲವು ಭಾಗಗಳಲ್ಲಿ ಮಾರ್ಚ್‌ 14ರವರೆಗೆ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಮಾರ್ಚ್ 11ರಿಂದ ಪೂರ್ವ ಮುಂಗಾರು ಮಾರುತ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಮಾರ್ಚ್14ರವರೆಗೆ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮೊದಲಾದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement