ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ಬೆಕ್ಕು ಅಡ್ಡ ಬಂತೆಂದು ಅದನ್ನು ಜೀವಂತವಾಗಿ ಸುಟ್ಟು ಹಾಕಿದ ಮಹಿಳೆ-ಇತರರು….!

ನವದೆಹಲಿ: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ತಾವು ಹೋಗುತ್ತಿದ್ದ ಬೈಕ್‌ ದಾರಿಯಲ್ಲಿ ಬೆಕ್ಕು ಅಡ್ಡಬಂದು ದಾಟಿದೆ ಎಂದು ಕೋಪಗೊಂಡ ಮಹಿಳೆ ಮತ್ತು ಆಕೆಯ ಸ್ನೇಹಿತರು ಅದನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ವರದಿಯಾಗಿದೆ.
ಬೆಕ್ಕನ್ನು ಜೀವಂತವಾಗಿ ಸೆರೆಹಿಡಿದು ಸುಟ್ಟು ಹಾಕಿರುವ ಮಹಿಳೆ ಮತ್ತು ಆಕೆಯ ಸ್ನೇಹಿತರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೊರಾದಾಬಾದಿನ ಭೋಜಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.
ದೆಹಲಿಯ ವೈಲ್ಡ್‌ಲೈಫ್ ಕ್ರೈಂ ಕಂಟ್ರೋಲ್ ಬ್ಯೂರೋಗೆ ವೀಡಿಯೊ ಸಹಿತ ಇಮೇಲ್ ದೂರು ಬಂದಿದೆ ಎಂದು ಎಸ್‌ಪಿ ದೇಹತ್ ಕುನ್ವರ್ ಆಕಾಶ್ ಸಿಂಗ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ ಕೆಲವರು ಬೆಕ್ಕನ್ನು ಹೊಡೆದು ನಂತರ ಅದು ಜೀವಂತವಾಗಿರುವಾಗಲೇ ಬೆಂಕಿ ಹಚ್ಚುತ್ತಿರುವುದನ್ನು ತೋರಿಸುತ್ತದೆ. ಮೋಟಾರ್‌ಸೈಕಲ್‌ ನಲ್ಲಿ ಹೋಗುತ್ತಿದ್ದಾಗ ಅದು ಬೈಕ್‌ ಮುಂದೆ ದಾಟಿದ ನಂತರ ಆರೋಪಿಗಳು ಈ ಕೃತ್ಯವೆಸಗಿದ್ದಾರೆ.
ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್ 9, 39 ಮತ್ತು 51 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪರಾಧ ಸಾಬೀತಾದರೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ದಂಡವಿದೆ.
ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ಪ್ರಕಾರ ಆರೋಪಿಯು ಈ ಘಟನೆಯನ್ನು ಕ್ಯಾಮೆರಾದಲ್ಲಿ ದಾಖಲಿಸಿದ್ದಾನೆ. ಅವರ ದ್ವಿಚಕ್ರವಾಹನವನ್ನು ಅಧಿಕಾರಿಗಳು ಗುರುತಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ | ಅಮೃತಸರದ ಗೋಲ್ಡನ್​ ಟೆಂಪಲ್ ಮೇಲೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನ; ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement