ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್ಐ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ನಟಿ ರನ್ಯಾ ರಾವ್ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಇಸಿಐಅರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರಿಂದ ಇ.ಡಿ. ದಾಳಿ ನಡೆಸಿದೆ. ನಟಿ ರನ್ಯಾ ರಾವ್ ಅವರ ಫ್ಲ್ಯಾಟ್, ಉದ್ಯಮಿ ತರುಣ ರಾಜ ಅವರ ಮನೆ, ಆರ್ಟಿ ನಗರದಲ್ಲಿರುವ ಜ್ಯೋತಿಷಿ ಕಚೇರಿ, ಪೊಲೀಸ್ ಅಧಿಕಾರಿಗಳು ಹಾಗೂ ಕಸ್ಟಮ್ಸ್ ಅಧಿಕಾರಿಗಳ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿದ್ದಾರೆ.
ಚಿನ್ನ ಕಳ್ಳ ಸಾಗಣೆ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹಾವಾಲಾ ದಂಧೆ ಮೂಲಕ ಹಣವು ಭಾರತದಿಂದ ಹಣ ದುಬೈಗೆ ರವಾನೆಯಾಗುತ್ತಿತ್ತು ಹಾಗೂ ನಂತರ ಚಿನ್ನದ ಗಟ್ಟಿ ರೂಪದಲ್ಲಿ ಅದು ಬೆಂಗಳೂರಿಗೆ ವಾಪಸ್ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಇಡ.ಡಿ.ದಾಳಿ ನಡೆದಿದೆ ಎನ್ನಲಾಗಿದೆ.
ಇಸಿಐಆರ್ ಎಂದರೆ ಎನ್ಫೋರ್ಸ್ಮೆಂಟ್ ಕೇಸ್ ಇನ್ಫಾರ್ಮೇಷನ್ ರಿಪೋರ್ಟ್ ಆಗಿದ್ದು, ಅಕ್ರಮ ಹಣ ವರ್ಗಾವಣೆ ವಿಚಾರ ತಿಳಿದಿರುವುದರಿಂದ ಈ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ