ಹೋಳಿ ಬಣ್ಣ ಹಚ್ಚುವುದನ್ನು ತಡೆದಿದ್ದಕ್ಕೆ ಯುವಕನನ್ನು ಹತ್ಯೆ ಮಾಡಿದರು…!

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಹೋಳಿ ಹಬ್ಬಕ್ಕೆ ಮುನ್ನ ಮೂವರು ವ್ಯಕ್ತಿಗಳು ಬಣ್ಣ ಬಳಿಯುವುದನ್ನು ತಡೆಯಲು ಯತ್ನಿಸಿದ 25 ವರ್ಷದ ಯುವಕನನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ಸಂಜೆ ರಾಲ್ವಾಸ್ ಗ್ರಾಮದಲ್ಲಿ ಅಶೋಕ, ಬಬ್ಲು ಮತ್ತು ಕಾಲುರಾಮ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಹಂಸರಾಜ ಎಂಬವರಿಗೆ ಬಣ್ಣ ಹಚ್ಚಲು ಸ್ಥಳೀಯ ಗ್ರಂಥಾಲಯಕ್ಕೆ ಬಂದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಂಸರಾಜ ಬಣ್ಣ ಹಾಕಿಸಿಕೊಳ್ಳಲು ನಿರಾಕರಿಸಿದ್ದರಿಂದ, ಮೂವರು ಆತನನ್ನು ಒದ್ದು ಬೆಲ್ಟ್‌ಗಳಿಂದ ಥಳಿಸಿದ್ದಾರೆ. ಅವರಲ್ಲಿ ಒಬ್ಬ ಕತ್ತು ಹಿಸುಕಿ ಸಾಯಿಸಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ದಿನೇಶ್ ಅಗರ್ವಾಲ್ ಹೇಳಿದ್ದಾರೆ.
ಇದರಿಂದ ಕೋಪಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹಂಸರಾಜ ಮೃತದೇಹದೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆದು ಗುರುವಾರ ಮಧ್ಯರಾತ್ರಿ 1 ಗಂಟೆಯವರೆಗೆ ಪ್ರತಿಭಟನೆ ನಡೆಸಿದರು.
ಹಂಸರಾಜ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು, ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು, ಮೂವರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕೊನೆಗೆ ಪೊಲೀಸರ ಭರವಸೆ ಮೇರೆಗೆ ಶವವನ್ನು ಹೆದ್ದಾರಿಯಿಂದ ಹೊರ ತೆಗೆಯಲಾಯಿತು.

ಪ್ರಮುಖ ಸುದ್ದಿ :-   ನಲ್ಲಿ ನೀರು ವಿವಾದ: ಕೇಂದ್ರ ಸಚಿವರ ಇಬ್ಬರು ಸೋದರಳಿಯಂದಿರ ನಡುವೆ ಗುಂಡಿನ ಚಕಮಕಿ, ಓರ್ವ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement