ಬೆಳಗಾವಿ: ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಭಾಗವಹಿಸಲು ನ್ಯಾಯಾಲಯ ಅವಕಾಶ ನೀಡಿದ್ದರಿಂದ ಈ ಇಬ್ಬರು ಮತದಾನ ಮಾಡುವ ಹಕ್ಕು ಪಡೆದಿದ್ದಾರೆ.
ಮಹಾನಗರ ಪಾಲಿಕೆ ಸದಸ್ಯರಾದ ಮಂಗೇಶ ಪವಾರ್ ಮತ್ತು ಜಯಂತ ಯಾದವ್ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಬೆಳಗಾವಿಯ ಗೋವಾವೇಸ್ ನಲ್ಲಿ ನಿರ್ಮಿಸಲಾಗಿರುವ ತಿನಿಸು ಕಟ್ಟೆ ಮಳಿಗೆಗಳನ್ನು ಪತ್ನಿಯರ ಹೆಸರಿನಲ್ಲಿ ಪಡೆದಿದ್ದಾರೆ ಎಂಬ ಕಾರಣಕ್ಕೆ ಪ್ರಾದೇಶಿಕ ಆಯುಕ್ತ ಶೆಟ್ಟೆಣ್ಣವರ ಅವರು ಈ ಇಬ್ಬರನ್ನು ಸದಸ್ಯರನ್ನು ಅನರ್ಹತೆಗೊಳಿಸಿ ಆದೇಶ ಹೊರಡಿಸಿದ್ದರು. ಮಾರ್ಚ್ 15 ರಂದು ನಡೆಯುವ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಸ್ಪರ್ಧೆಸಲು ಮತ್ತು ಮತ ಚಲಾಯಿಸಲು ಸಾಧ್ಯವಾಗದ ಸ್ಥಿತಿ ಇತ್ತು. ಇದನ್ನು ಪ್ರಶ್ನಿಸಿ ಇಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ನ್ಯಾಯಾಲಯ ಇಬ್ಬರು ಸದಸ್ಯರಿಗೆ ಮತದಾನ ಮಾಡುವ ಹಕ್ಕು ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ