ಹಿರಿಯೂರು ಬಳಿ ಅಪಘಾತ ; ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ (ಮಾರ್ಚ್‌ 14) ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.
ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿನಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಬಿದ್ದ ರುದ್ರಪ್ಪ ಲಮಾಣಿ ಅವರ ತಲೆ, ಕೈಕಾಲುಗಳಿಗೆ ಹಾಗೂ ಮೊಣಕಾಲಿಗೆ ಗಾಯವಾಗಿದ್ದು, ತಕ್ಷಣವೇ ಅವರಿಗೆ ಹಿರಿಯೂರಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ದಾವಣಗೆರೆ ಆಸ್ಪತ್ರೆಗೆ ಒಯ್ಯಲಾಗಿದೆ. ಮಾಡಲಾಗಿದೆ.
ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಕರ್ನಾಟಕ ವಿಧಾನ ಮಂಡಲ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಕುಮಾರಪಟ್ಟಣಂ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹಿರಿಯೂರು ತಾಲೂಕಿನ ಜೆಜಿ ಹಳ್ಳಿ ಸಮೀಪ ಎಳನೀರು ಕುಡಿಯಲು ಅವರು ಕಾರು ನಿಲ್ಲಿಸಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆಂದು ಸರ್ವಿಸ್ ರಸ್ತೆ ದಾಟುವಾಗ ವ್ಯಕ್ತಿಯೊಬ್ಬರ ಬೈಕ್ ಡಿಕ್ಕಿಯಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement