ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್‍ಗೆ ‘ಕಡ್ಡಾಯ ರಜೆ’ ನೀಡಿದ ಸರ್ಕಾರ

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ಅವರ ಮಲತಂದೆ, ಕರ್ನಾಟಕದ ಡಿಜಿಪಿ ಶ್ರೇಣಿಯ ಅಧಿಕಾರಿ ರಾಮಚಂದ್ರರಾವ್ ಅವರನ್ನು ಶನಿವಾರ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಪ್ರಸ್ತುತ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಡಿಜಿಪಿ ರಾಮಚಂದ್ರರಾವ್‌ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮೂಲಕ ಸರ್ಕಾರ ನಿರ್ದೇಶನ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದ್ದು, ಅವರ ಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ನೇಮಕಾತಿ) ಕೆ.ವಿ. ಶರತ್ ಚಂದ್ರ ಅವರನ್ನು ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕೆಗೆ ಕಾನೂನು ಬಾಹಿರವಾಗಿ ಶಿಷ್ಟಾಚಾರ (ಪ್ರೋಟೋಕಾಲ್‌) ಸೌಲಭ್ಯ ಸಿಕ್ಕ ವಿಚಾರ ಬಯಲಾಗಿ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಡಿಜಿಪಿ ರಾಮಚಂದ್ರರಾವ್ ವಿರುದ್ಧ ತನಿಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ನೇತೃತ್ವದಲ್ಲಿ ತನಿಖಾ ತಂಡವನ್ನು ಸರ್ಕಾರ ರಚಿಸಿತ್ತು. ಈ ಮಧ್ಯೆ ರನ್ಯಾ ರಾವ್‌ ಮನೆ ಮೇಲೆ ಇ.ಡಿ ಕೂಡ ದಾಳಿ ನಡೆಸಿತ್ತು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement