ಸರಿಯಾಗಿ ಓದುತ್ತಿಲ್ಲ ಎಂದು ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ತಂದೆ…!

ಕಾಕಿನಾಡು : ಆಂಧ್ರಪ್ರದೇಶದ ಕಾಕಿನಾಡದಲ್ಲಿ 37 ವರ್ಷದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ಒಎನ್‌ಜಿಸಿ)ದ ಉದ್ಯೋಗಿಯೊಬ್ಬರು ಶೈಕ್ಷಣಕವಾಗಿ ಉತ್ತಮ ಸಾಧನೆ ಮಾಡಿಲ್ಲ ಎಂಬ ಕಾರಣಕ್ಕೆ ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃಯದವಿದ್ರಾವಕ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಕ್ಕಳ ಕಳಪೆ ಶೈಕ್ಷಣಿಕ ಫಲಿತಾಂಶದಿಂದ ನಿರಾಶೆಗೊಂಡ ವ್ಯಕ್ತಿ ತನ್ನ ಮಕ್ಕಳನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಕೊಂದಿದ್ದಾನೆ.
ವ್ಯಕ್ತಿ ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡಿರುವುದು ಮತ್ತು ಮಕ್ಕಳು ಬಕೆಟ್‌ನಲ್ಲಿ ನಿರ್ಜೀವವಾಗಿ ಬಿದ್ದಿದ್ದನ್ನು ಪತ್ನಿ ಕಂಡ ನಂತರದಲ್ಲಿ ಘಟನೆ ಬೆಳಕಿಗೆ ಬಂದಿದೆ.
ತನ್ನ ಮಕ್ಕಳು ಅಧ್ಯಯನದಲ್ಲಿಉತ್ತಮ ಸಾಧನೆ ಮಾಡದಿದ್ದರೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಷ್ಟಪಡುತ್ತಾರೆ ಮತ್ತು ಬಳಲುತ್ತಾರೆ ಎಂಬ ಭಯದಿಂದ ಈ ವ್ಯಕ್ತಿ ತನ್ನ ಮಕ್ಕಳನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿಗಳ ಪ್ರಕಾರ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿ ಮೂಲದ ವನಪಲ್ಲಿ ಚಂದ್ರಕಿಶೋರ ಎಂಬಾತ ಸ್ಥಳೀಯ ಒಎನ್‌ಜಿಸಿ ಕಚೇರಿಯಲ್ಲಿ ಸಹಾಯಕ ಲೆಕ್ಕಪತ್ರಗಾರರಾಗಿ ಕೆಲಸ ಮಾಡುತ್ತಿದ್ದ. ತನ್ನ ಇಬ್ಬರು ಮಕ್ಕಳ ಬಗ್ಗೆ ಅತಿಯಾದ ಕನಸು ಕಂಡಿದ್ದ ಈತ ಪ್ರತೀ ಬಾರಿ ಅವರು ಪರೀಕ್ಷೆಯಲ್ಲಿ ಪಡೆಯುತ್ತಿದ್ದ ಅಂಕವನ್ನು ಕಂಡು ತೀವ್ರ ಅಸಮಾಧಾನಗೊಂಡಿದ್ದ. ಈ ಬಗ್ಗೆ ಹಲವು ಬಾರಿ ಮನೆಯಲ್ಲಿ ಗಲಾಟೆ ನಡೆದಿದೆ. ಹೋಳಿ ಹಬ್ಬದ ಸಂದರ್ಭದಲ್ಲಿ, ಈತ ಪತ್ನಿ ಮತ್ತು ಇಬ್ಬರು ಪುತ್ರರನ್ನು ತಮ್ಮ ಕಚೇರಿಗೆ ಹೋಗಿದ್ದ. ನಂತರ, ಮಕ್ಕಳನ್ನು ಸಮವಸ್ತ್ರದ ಅಳತೆಗಳನ್ನು ತೆಗೆದುಕೊಳ್ಳುವುದಿದೆ, ಹೀಗಾಗಿ ಟೈಲರ್ ಬಳಿ ಕರೆದೊಯ್ಯುವೆ, ಹೀಗಾಗಿ ನೀನು ಇಲ್ಲೆ ಇರು ಎಂದು ಪತ್ನಿಗೆ ಕಚೇರಿಯಲ್ಲಿಯೇ ಇರಲು ಮನವೊಲಿಸಿ ಇಬ್ಬರು ಮಕ್ಕಳನ್ನು ನೇರ ಮನೆಗೆ ಕರೆದುಕೊಂಡು ಹೋಗಿದ್ದಾನೆ.

ಪ್ರಮುಖ ಸುದ್ದಿ :-   ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್....: 9 ಮಂದಿ 'ಪಾಕಿಸ್ತಾನ ಗೂಢಚಾರರ' ಬಂಧನ

ಮನೆಗೆ ಹೋದ ನಂತರ ಅವರ ಕೈಕಾಲುಗಳನ್ನು ಕಟ್ಟಿ, ನೀರು ತುಂಬಿದ ಬಕೆಟ್‌ಗಳಲ್ಲಿ ಅವರ ತಲೆ ಮುಳುಗಿಸಿ ಕೊಂದಿದ್ದಾನೆ. ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತಿ ಬಹಳ ಸಮಯವಾದರೂ ಹಿಂತಿರುಗದಿದ್ದಾಗ, ಪತ್ನಿ ಮನೆಗೆ ಹೋಗಿದ್ದಾಳೆ. ಆಗ ಪತಿ ಮತ್ತು ಮಕ್ಕಳುಸಾವಿಗೀಡಾಗಿರುವುದು ಕಂಡು ಬಂದಿದೆ ಎಂದು ಹೇಳಲಾಗಿದೆ.
“ಈ ಆಲೋಚನೆ ಬಂದ ನಂತರ ಮುಂದಿನ ಬುದುಕಿನ ಬಗ್ಗೆ ಚಿಂತೆ ಮಾಡಿ ಆ ತೀವ್ರ ಹೆಜ್ಜೆ ಇಟ್ಟಿದ್ದಾನೆ” ಎಂದು ಪೊಲೀಸರು ಹೇಳಿದ್ದಾರೆ.
ಘಟನಾ ಸ್ಥಳದಿಂದ ಆತ್ಮಹತ್ಯಾ ಟಿಪ್ಪಣಿಯನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಪೊಲೀಸರು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳು ಫೋರೆನ್ಸಿಕ್ ತಂಡಗಳನ್ನು ನಿಯೋಜಿಸಿದ್ದಾರೆ ಮತ್ತು ಅಪರಾಧಕ್ಕೆ ಕಾರಣವಾಗುವ ಪರಿಸ್ಥಿತಿಯನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement