ಪ್ರಚೋದನಕಾರಿ ಹೇಳಿಕೆ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ ಐಆರ್‌

ಮಂಗಳೂರು : ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಹಿನ್ನಲೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಮಾರ್ಚ್ 9 ರಂದು ವಿಎಚ್‌ಪಿ ಆಯೋಜಿಸಿದ್ದ ಕೊರಗಜ್ಜನ‌ ಆದಿಕ್ಷೇತ್ರಕ್ಕೆ ನಮ್ಮ‌ನಡೆ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡುವಾಗ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈಗ ಪ್ರಚೋದನಕಾರಿ ಭಾಷಣ ಮಾಡಿ,‌ ಕೋಮು ದ್ವೇಷಕ್ಕೆಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಎಂಬವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಈ ದೂರಿನ‌ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

3 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ನಿಮ್ಮ ಕಾಮೆಂಟ್ ಬರೆಯಿರಿ

advertisement