ಶಿರಸಿ | ಅಣ್ಣನನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಮ್ಮ…!

ಶಿರಸಿ : ಕ್ಷುಲ್ಲಕ ಕಾರಣಕ್ಕೆ ತಮ್ಮನೇ ಅಣ್ಣನನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ(sirsi) ತಾಲೂಕಿನ ಹುತ್ಗಾರಿನಲ್ಲಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಕೊಲೆಯಾದ ವ್ಯಕ್ತಿಯನ್ನು ತ್ಯಾಗರಾಜ ಗಣಪತಿ ಮುಕ್ರಿ (30) ಎಂದು ಗುರುತಿಸಲಾಗಿದ್ದು, ಈತನ ತಮ್ಮನಾದ ಶಿವರಾಜ ಗಣಪತಿ ಮುಕ್ರಿ ಕೊಲೆ ಆರೋಪಿಯಾಗಿದ್ದಾನೆ. ಸಾರಾಯಿ ಕುಡಿದು ಬಂದಿದ್ದ ಶಿವರಾಜ ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಗಲಾಟೆ ಶುರು ಮಾಡಿದ್ದ. ಮನೆಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಹಾಕಿದ್ದ. ಇದನ್ನು ಅಣ್ಣ ಪ್ರಶ್ನಿಸಿದ್ದಾನೆ ಎಂಬ ಕಾರಣಕ್ಕೆ ಕೋಪಗೊಂಡ ತಮ್ಮ ಅಲ್ಲೇ ಇದ್ದ ಸುತ್ತಿಗೆಯನ್ನು ಬೀಸಿ ಅಣ್ಣನ ತಲೆಗೆ ಹೊಡೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ಅಣ್ಣನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಗಲಾಟೆ ತಪ್ಪಿಸಲು ಬಂದ ತ್ಯಾಗರಾಜ ಪತ್ನಿ ಹೇಮಾವತಿ ಹಾಗು ರೋಹಿತ ಮುಕ್ರಿ ಮೇಲೂ ಶಿವರಾಜ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆದಿದೆ.

ಪ್ರಮುಖ ಸುದ್ದಿ :-   ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement