ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ ಅವರು ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರೊಬ್ಬರು ಆರೋಪಿಸಿ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ ಅವರು ದೂರು ದಾಖಲಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೂ ದೂರು ನೀಡಿದ್ದಾರೆ.
ಎಚ್ ಎಂ ರೇವಣ್ಣ ಅವರನ್ನು ನಗರದ ಕೆ ಕೆ ಗೆಸ್ಟ್ ಹೌಸ್ ನಲ್ಲಿ ಭೇಟಿ ಮಾಡಿದ್ದ ಮಹಿಳೆ ಈ ಸಂಬಂಧ ವಿಡಿಯೋ ಹಂಚಿಕೊಂಡಿದ್ದಾರೆ.
ಸೋಮವಾರ ಕೆ ಕೆ ಗೆಸ್ಟ್ ಹೌಸ್ ನಲ್ಲಿ ಎಚ್ ಎಂ ರೇವಣ್ಣ ಅವರನ್ನು ಭೇಟಿ ಮಾಡಲು ಹೋದಾಗ ಅವರು ಊಟ ಮಾಡುತ್ತಿದ್ದರು. ಈ ವೇಳೆ ನನ್ನ ಮೊಬೈಲ್ ಕಸಿದುಕೊಂಡು ನನಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ