ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ವಿರುದ್ಧ ಅಶ್ಲೀಲ ಪದ ಬಳಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಮಂಗಳವಾರ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಅಕುಲ ಅನುರಾಧ ಎಂಬುವವರು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ ಯತ್ನಾಳ್ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 79 ಅಡಿ ಎಫ್‌ಐಆರ್ ದಾಖಲಾಗಿದೆ. ದೂರಿನನ್ವಯ ಬಿಎನ್‌ಎಸ್ ಸೆಕ್ಷನ್ 79 ಅಡಿ ಎಫ್‌ಐಆರ್ ದಾಖಲಾಗಿದೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ