ರಾಯ್ಪುರ: ಎಡಪಂಥೀಯ ಉಗ್ರವಾದದ ವಿರುದ್ಧದ ಬೃಹತ್ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಗುರುವಾರ (ಮಾರ್ಚ್ 20) ಛತ್ತೀಸ್ಗಢದ ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ 26 ನಕ್ಸಲರನ್ನು ಕೊಂದಿವೆ.
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್ಕೌಂಟರ್ನಲ್ಲಿ 18 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್ಕೌಂಟರ್ನಲ್ಲಿ ಒಬ್ಬ ಪೊಲೀಸ್ ಜವಾನ ಕೂಡ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (ಬಿಜಾಪುರದಲ್ಲಿ) ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಬರುತ್ತಿರುವಾಗ ಬಿಜಾಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 7ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು.
18 ನಕ್ಸಲರ ಮೃತದೇಹಗಳು ಹಾಗೂ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸ್ನ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಘಟಕದ ಒಬ್ಬ ಯೋಧ ಕೂಡ ಹುತಾತ್ಮರಾಗಿದ್ದಾರೆ ಎಂದು ಅವರು ಹೇಳಿದರು. ಆ ಪ್ರದೇಶದಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.
ಕಂಕೇರ್ ಜಿಲ್ಲೆಯಲ್ಲಿ ಗುರುವಾರ ಪಿಎಸ್ ಛೋಟೆಬೆಥಿಯಾ ಗ್ರಾಮದ ಕೊರೊಸ್ಕೊಡೊ ಬಳಿ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಸಾವಿಗೀಡಾಗಿದ್ದಾರೆ.
ಏತನ್ಮಧ್ಯೆ, ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಪ್ರದೇಶದಲ್ಲಿ ನಕ್ಸಲರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ್ದಾರೆ.ನಾರಾಯಣಪುರ ಪೊಲೀಸರ ಪ್ರಕಾರ, ಸ್ಫೋಟದಲ್ಲಿ ಯಾವುದೇ ಗಂಭೀರ ಗಾಯಗಳು ವರದಿಯಾಗಿಲ್ಲ. ದಾಳಿಗೆ ಕಾರಣರಾದ ಬಂಡುಕೋರರನ್ನು ಪತ್ತೆ ಹಚ್ಚಲು ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.
ನಕ್ಸಲೀಯರು ಇಂದು ಅಬುಜ್ಮದ್ನಲ್ಲಿ ಐಇಡಿ ಸ್ಫೋಟವನ್ನು ನಡೆಸಿದ್ದಾರೆ. ಸ್ಫೋಟದಿಂದಾಗಿ ಜವಾನ ಮತ್ತು ಅಧಿಕಾರಿಯ ಕಣ್ಣಿಗೆ ಧೂಳು ಮತ್ತು ಮಣ್ಣು ಸೇರಿತು, ನಂತರ ಅವರನ್ನು ಚಿಕಿತ್ಸೆಗಾಗಿ ಕಾರ್ಯಾಚರಣೆ ಪ್ರದೇಶದಿಂದ ಸ್ಥಳಾಂತರಿಸಲಾಯಿತು. ಐಇಡಿ ಸ್ಫೋಟದಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.
ಈ ವರ್ಷ ವಿವಿಧ ಎನ್ಕೌಂಟರ್ಗಳಲ್ಲಿ 100ಕ್ಕೂ ಹೆಚ್ಚು ನಕ್ಸಲೀಯರು ಹತ
2025 ರಲ್ಲಿ ಛತ್ತೀಸ್ಗಢದ ವಿವಿಧ ಭಾಗಗಳಲ್ಲಿ ನಡೆದ ಎನ್ಕೌಂಟರ್ಗಳಲ್ಲಿ 100 ಕ್ಕೂ ಹೆಚ್ಚು ನಕ್ಸಲೀಯರು ಹತರಾಗಿದ್ದಾರೆ. ಈ ವರ್ಷದಲ್ಲಿ, ಮಾರ್ಚ್ 1 ರವರೆಗೆ, 83 ನಕ್ಸಲೀಯರು ಕೊಲ್ಲಲ್ಪಟ್ಟಿದ್ದಾರೆ. ಅದೇ ವೇಳೆಗೆ ಗುರುವಾರ 22 ನಕ್ಸಲೀಯರು ಹತರಾಗಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ