ನವದೆಹಲಿ : ಅಮೆರಿಕದ ಜಾರ್ಜ್ಟೌನ್ ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡುತ್ತಿರುವ ಭಾರತೀಯ ಸಂಶೋಧನಾ ವಿದ್ಯಾರ್ಥಿಯನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ ಮತ್ತು ಅವರನ್ನು ಗಡೀಪಾರು ಮಾಡಲಾಗುತ್ತದೆ ಎಂದು ಅವರ ವಕೀಲರು ತಿಳಿಸಿದ್ದಾರೆ.
ಪೋಸ್ಟ್-ಡಾಕ್ಟರಲ್ ಫೆಲೋ ಆಗಿರುವ ಬಾದರ್ ಖಾನ್ ಸೂರಿ ಅವರನ್ನು ಸೋಮವಾರ ರಾತ್ರಿ ವರ್ಜೀನಿಯಾದ ಅವರ ಮನೆಯ ಹೊರಗೆ ಹೋಮ್ಲ್ಯಾಂಡ್ ಸೆಕ್ಯುರಿಟಿ ಬಂಧಿಸಿದೆ. ಅಮೆರಿ ಸರ್ಕಾರವು ಅವರ ವೀಸಾವನ್ನು ರದ್ದುಗೊಳಿಸಿದೆ ಎಂದು ಅವರು ಹೇಳಿದ್ದಾರೆ. ಬಾದರ್ ಖಾನ್ ಸೂರಿ “ಹಮಾಸ್ ಪ್ರಚಾರ ನಡೆಸುತ್ತಿದ್ದಾರೆ” ಎಂದು ಆರೋಪಿಸಲಾಗಿದೆ ಹಾಗೂ. ಗೊತ್ತಿರುವ ಅಥವಾ ಶಂಕಿತ ಭಯೋತ್ಪಾದಕರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದಾರೆ” ಎಂದು ಹೇಳಲಾಗುತ್ತದೆ.
ಸೂರಿ ಜಾರ್ಜ್ಟೌನ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿನಿಮಯ ವಿದ್ಯಾರ್ಥಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹಮಾಸ್ ಪ್ರಚಾರವನ್ನು ಸಕ್ರಿಯವಾಗಿ ಮಾಡುತ್ತಿದ್ದರು ಮತ್ತು ಯೆಹೂದಿ ವಿರೋಧಿ ವಿಚಾರಗಳನ್ನು ಪ್ರಚಾರ ಮಾಡುತ್ತಿದ್ದರು ಎಂದು ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆಯ ಸಹಾಯಕ ಕಾರ್ಯದರ್ಶಿ ಟ್ರಿಸಿಯಾ ಮೆಕ್ಲಾಫ್ಲಿನ್ ಎಕ್ಸ್ನಲ್ಲಿ ಬರೆದಿದ್ದಾರೆ.
ಡಾ. ಬದರ್ ಖಾನ್ ಸೂರಿ ವಾಷಿಂಗ್ಟನ್ ಡಿಸಿಯ ಜಾರ್ಜ್ಟೌನ್ ವಿಶ್ವವಿದ್ಯಾಲಯದ ಎಡ್ಮಂಡ್ ಎ. ವಾಲ್ಷ್ ಸ್ಕೂಲ್ ಆಫ್ ಫಾರಿನ್ ಸರ್ವಿಸ್ನಲ್ಲಿರುವ ಅಲ್ವಲೀದ್ ಬಿನ್ ತಲಾಲ್ ಸೆಂಟರ್ ಫಾರ್ ಮುಸ್ಲಿಂ-ಕ್ರಿಶ್ಚಿಯನ್ ಅಂಡರ್ಸ್ಟಾಂಡಿಂಗ್ನಲ್ಲಿ ಪೋಸ್ಟ್ಡಾಕ್ಟರಲ್ ಫೆಲೋ ಆಗಿದ್ದಾರೆ.
2020 ರಲ್ಲಿ ನವದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ನೆಲ್ಸನ್ ಮಂಡೇಲಾ ಸೆಂಟರ್ ಫಾರ್ ಪೀಸ್ ಅಂಡ್ ಕಾನ್ಫ್ಲಿಕ್ಟ್ ರೆಸಲ್ಯೂಷನ್ನಿಂದ ಶಾಂತಿ ಮತ್ತು ಸಂಘರ್ಷ ಅಧ್ಯಯನ ವಿಚಾರದಲ್ಲಿ ಪಿಎಚ್ಡಿ ಪದವಿ ಪಡೆದಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ