ಕೆ ಪಿ ಎಸ್‌ ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯನ್ನು (KAS Mains exam) ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿದೆ.
ಆಯೋಗವು ಫೆ.13ರಂದು ಮುಖ್ಯ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಿತ್ತು ಮಾರ್ಚ್‌ 28, 29, ಏಪ್ರಿಲ್ 1, ಮತ್ತು 2ರಂದು ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿತ್ತು. ಆದರೆ, ಕಾರಣಾಂತರಗಳಿಂದ ಈ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಪಿಎಸ್‌ಸಿ (KPSC) ತಿಳಿಸಿದೆ.
ಕರ್ನಾಟಕ ಲೋಕಸೇವಾ ಆಯೋಗ ಈ ಮೊದಲು 2024ರ ಆಗಸ್ಟ್‌ 27ಕ್ಕೆ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ, ಪ್ರಶ್ನೆಪತ್ರಿಕೆಯನ್ನು ಆಂಗ್ಲ ಭಾಷೆಗೆ ಅನುವಾದ ಮಾಡುವಾಗ ಭಾರಿ ಲೋಪಗಳಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಆನಂತರ 2024ರ ಡಿಸೆಂಬರ್‌ 29ರಂದು ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ 553 ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವಾಭಾವಿ ಮರು ಪರೀಕ್ಷೆ ನಡೆಸಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement