ಇಂದಿನಿಂದ ಒಂದು ವಾರ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮಾರ್ಚ್‌ 22ರಿಂದ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಬಹುದು, ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾಧ್ಯತೆಯಿದ್ದು ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಮಾರ್ಚ್‌ 24ರಂದು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಮಾರ್ಚ್‌ 25ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ಮಾರ್ಚ್‌ 26ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಮಾರ್ಚ್‌ 27ರಂದು ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement