ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣ; ಎಂಜಿನಿಯರ್ ರಶೀದ್ ಜಾಮೀನು ಅರ್ಜಿ ವಜಾ

ನವದೆಹಲಿ: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಲೋಕಸಭಾ ಸಂಸದ ಎಂಜಿನಿಯರ್ ರಶೀದ್ (Engineer Rashid) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಎಂಜಿನಿಯರ್ ರಶೀದ್ ಎಂದೇ 2017ರ ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದಲ್ಲಿ 2019 ರಿಂದ ತಿಹಾರ್‌ ಜೈಲಿನಲ್ಲಿದ್ದಾನೆ. 2017ರಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಎನ್‌ಐಎ ಶೇಖ್‌ ಅಬ್ದುಲ್‌ ರಶೀದ್‌ ವಿರುದ್ಧ ಯುಎಪಿಎ ಕಾಯಿದೆ ಅಡಿ ಪ್ರಕರಣ ದಾಖಲಿಸಿತ್ತು. 2019ರಲ್ಲಿ ಎನ್‌ಐಎ ಆತನನ್ನು ಬಂಧಿಸಿತ್ತು. ಜನವರಿ 22 ರಂದು, ರಶೀದ್ ತನ್ನ ಜಾಮೀನು ಅರ್ಜಿಯ ತೀರ್ಪು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ.
2024 ರ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಶೀದ್ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಬಾರಾಮುಲ್ಲಾ ಕ್ಷೇತ್ರದಿಂದ ಸೋಲಿಸುವ ಮೂಲಕ ಸುದ್ದಿಯಾಗಿದ್ದ. ನಂತರ ಪ್ರಮಾಣ ವಚನ ಸ್ವೀಕರಿಸಲು ಎನ್‌ಐಎ ಅನುಮತಿ ನೀಡಿತ್ತು. ಜುಲೈ 5 ರಂದು, ಲೋಕಸಭೆಯ ಸದಸ್ಯನಾಗಿ ಪ್ರಮಾಣ ವಚನ ಸ್ವೀಕರಿಸಲು ನ್ಯಾಯಾಲಯ ರಶೀದ್‌ಗೆ ಕಸ್ಟಡಿ ಪೆರೋಲ್ ನೀಡಿತ್ತು.

ಪ್ರಮುಖ ಸುದ್ದಿ :-   ಹೈದರಾಬಾದ್‌ ಚಾರ್ಮಿನಾರ್ ಬಳಿ ಕಟ್ಟಡದಲ್ಲಿ ಬೆಂಕಿ ಅವಘಡ : 8 ಮಕ್ಕಳು ಸೇರಿ 17 ಮಂದಿ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement