ನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ ಎಂಬ ಆರೋಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಸಮಿತಿ ಸದಸ್ಯರು ಎಂದು ಸುಪ್ರೀಂ ಕೋರ್ಟ್ ಪತ್ರಿಕಾ ಟಿಪ್ಪಣಿಯಲ್ಲಿ ತಿಳಿಸಿದೆ.
ಸದ್ಯಕ್ಕೆ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವರ್ಮಾ ಅವರಿಗೆ ಯಾವುದೇ ನ್ಯಾಯಾಂಗ ಕಾರ್ಯವನ್ನು ನಿಯೋಜಿಸಬೇಡಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಲ್ಲಿಸಿದ ವರದಿ, ನ್ಯಾಯಮೂರ್ತಿ ವರ್ಮಾ ಅವರ ಪ್ರತಿಕ್ರಿಯೆ ಮತ್ತು ಇತರ ದಾಖಲೆಗಳನ್ನು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿಯ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ನಂದಿಸಲು ತೆರಳಿದ ಅಗ್ನಿಶಾಮಕ ದಳದವರಿಗೆ ದೊಡ್ಡ ಪ್ರಮಾಣದ ಹಣ ಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಅಗ್ನಿಶಾಮಕ ದಳದವರು ಅಲ್ಲಿಗೆ ಬಂದು ಬೆಂಕಿಯನ್ನು ನಿಯಂತ್ರಿಸಿದರು ಮತ್ತು ಆಗ ಅವರು ನಗದು ರಾಶಿಯನ್ನು ನೋಡಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಪತ್ತೆ ಹಚ್ಚಿದ ಮೊತ್ತ ಎಷ್ಟು ಎಂಬುದು ತಿಳಿದುಬಂದಿಲ್ಲ.

ಪ್ರಮುಖ ಸುದ್ದಿ :-   ತನ್ನ ಡ್ರೋನ್‌ಗಳ ಮೇಲೆ ಭಾರತದ ದಾಳಿಯಿಂದ ಪಾರಾಗಲು ಪ್ರಯಾಣಿಕ ವಿಮಾನಗಳನ್ನು ಬಳಸಿಕೊಂಡು ಪಾಕಿಸ್ತಾನ ಸೇನೆ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement