ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ (Hubballi) ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲು ಮತ್ತೊಂದು ವಿಮಾನಯಾನ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಭಾನುವಾರ ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಈ ಸೇವೆ ಆರಂಭಿಸುವ ಕುರಿತು ನಿರ್ಣಯಕೈಗೊಳ್ಳಲಾಗಿದೆ ಮಾರ್ಚ್ 30 ವಿಮಾನಯಾನ ಪ್ರಾರಂಭವಾಗಲಿದ್ದು, ಈ ಮೂಲಕ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು ಮತ್ತು ಹುಬ್ಬಳ್ಳಿ ಮಧ್ಯ ಸಂಚರಿಸಲಿವೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರುನಿಂದ ಹುಬ್ಬಳ್ಳಿ 6E7056 ಬೆಳಿಗ್ಗೆ 9:55 – ಬೆಳಿಗ್ಗೆ 11:20
ಹುಬ್ಬಳ್ಳಿಯಿಂದ ಬೆಂಗಳೂರು 6E7263 ಬೆಳಿಗ್ಗೆ 11:55 – ಮಧ್ಯಾಹ್ನ 1:20
ಇದರಿಂದ ಹುಬ್ಬಳ್ಳಿ – ಧಾರವಾಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಬೆಂಗಳೂರಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹೀಗಾಗಿ ಹುಬ್ಬಳ್ಳಿ – ಬೆಂಗಳೂರು ನಡುವೆ ಮತ್ತೊಂದು ವಿಮಾನಸೇವೆಗೆ ಅವಕಾಶ ಕಲ್ಪಿಸಿದ್ದಕ್ಕಾಗಿ ಸಚಿವರು ಇಂಡಿಗೋ (Indigo) ಆಡಳಿತ ವರ್ಗಕ್ಕೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ, ಹುಬ್ಬಳ್ಳಿ ಮತ್ತು ಅಹ್ಮದಾಬಾದ್ (Ahmedabad) ನಡುವೆ ವಿಮಾನಯಾನ ಆರಂಭಿಸುವಂತೆ ಅವರು ಇಂಡಿಗೋ ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ