ಬೆಳಗಾವಿ: ಎಂಇಎಸ್ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗೆ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಎಂಇಎಸ್ ಯುವ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಈಚೆಗೆ ಬೆಳಗಾವಿ ಬಳಿ ಬಸ್ ನಿರ್ವಾಹಕನ ಮೇಲೆ ನಡೆದ ಹಲ್ಲೆಯ ಘಟನೆಯನ್ನು ಶುಭಂ ತನ್ನ ಫೇಸ್ಬುಕ್ ಖಾತೆಯಲ್ಲಿ ಸಮರ್ಥಿಸಿಕೊಂಡಿದ್ದರು. ಕರ್ನಾಟಕದಲ್ಲಿರುವ ಕನ್ನಡ ಸಂಘಟನೆಗಳು ನಾಲಾಯಕ್’ ಎಂದು ವಿವಾದಾತ್ಮಕವಾಗಿ ಹೇಳಿಕೆ ಕೊಟ್ಟಿದ್ದಲ್ಲದೇ ಕನ್ನಡಿಗರು ಮತ್ತು ಮರಾಠಿಗರ ನಡುವಿನ ಸೌಹಾರ್ದತೆ ಕದಡಲು ಯತ್ನಿಸಿದ್ದರು ಎಂಬ ಆರೋಪದಡಿ ಮಾಳಮಾರುತಿ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿತ್ತು.
ಮರಾಠಿ ಭಾಷೆಯಲ್ಲೇ ಮಾತನಾಡುವಂತೆ ಕಿಣಿಯೆ ಗ್ರಾಮದ ಪಿಡಿಒಗೆ ಬೆದರಿಕೆ ಹಾಕಿದ ತಿಪ್ಪಣ್ಣ ಡೋಕ್ರೆ ಎಂಬಾತನನ್ನು ಸನ್ಮಾನಿಸಿದ್ದರು. ಮೇಲಿಂದ ಮೇಲೆ ಕನ್ನಡ ವಿರೋಧಿ ಹಾಗೂ ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಶುಭಂ ಶೆಳಕೆಯನ್ನು ಬಂಧಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ