ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 26ರಂದು ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂನೆ ನೀಡಿದೆ.
ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ-ದಕ್ಷಿಣ ಟ್ರೋಫ್ ರಚನೆಯಾಗುತ್ತಿದೆ. ಇದು ಸಮುದ್ರ ಮಟ್ಟದಿಂದ ಸರಾಸರಿ 0.9 ಕಿ.ಮೀ ಎತ್ತರದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಮೂಲಕ ಹಾದುಹೋಗುತ್ತದೆ ಎಂದು ಹೇಳಿದೆ.
ಮಾರ್ಚ್ 26ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹೇಳಿದೆ.
ಬೆಂಗಳೂರಿಗೆ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 22°C ಅಗುವ ಸಾಧ್ಯತೆ ಇದೆ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ