ಪಕ್ಷದ ಶಿಸ್ತು ಉಲ್ಲಂಘನೆ ; ಶಿವರಾಮ ಹೆಬ್ಬಾರ, ಸೋಮಶೇಖರ ಸೇರಿ ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್‌ ನೋಟಿಸ್‌

ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ, ಪಕ್ಷದ ಇಮೇಜಿಗೆ ಧಕ್ಕೆ ಆಗುವಂತೆ ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ.
ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖ‌ರ ಸೇರಿದಂತೆ ಐವರಿಗೆ ಕಾರಣ ಕೇಳಿ ನೋಟಿಸ್ ನೀಡಿದೆ.
ಸಾರ್ವಜನಿಕ ವೇದಿಕೆಗಳಲ್ಲಿ ಪಕ್ಷದ ಅಂತರಿಕ ವಿಚಾರಗಳನ್ನು ಬಹಿರಂಗವಾಗಿ ಮಾತನಾಡಿದ್ದಕ್ಕಾಗಿ ರಾಜ್ಯದ ಹಿರಿಯ ನಾಯಕರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ಹರಿಹರ ಶಾಸಕ ಬಿ.ಪಿ. ಹರೀಶ ಅವರಿಗೂ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ.

ಈ ನಿಟ್ಟಿನಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮಕೈಗೊಳ್ಳಬಾರದು ಎಂದು ಉತ್ತರ ನೀಡುವಂತೆ 72 ಗಂಟೆಗಳ ಕಾಲಾವಕಾಶ ನೀಡಿ ಶಿಸ್ತು ಸಮಿತಿ ನೋಟಿಸ್‌ ನೀಡಿದೆ.
ಈಗಾಗಲೇ ಸೋಮಶೇಖರ ಅವರು ಬಹಿರಂಗವಾಗಿಯೇ ಕಾಂಗ್ರೆಸ್‌ ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ, ಶಿವರಾಮ್ ಹೆಬ್ಬಾರ ಸಹ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ಇಬ್ಬರ ನಾಯಕರ ನಡೆ ಬಗ್ಗೆ, ರಾಜ್ಯ ಬಿಜೆಪಿಯ ಶಿಸ್ತು ಸಮಿತಿಯು ಈಗಾಗಲೇ ಕ್ರಮವಾಗಲಿದೆ ಎಂದು ಹೇಳಿತ್ತು. ಇದೀಗ ಇವರು ಸೇರಿ ಐವರಿಗೆ ನೋಟಿಸ್‌ ನೀಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತತ್ತರ ; ಬುಲ್ಡೋಜರ್‌ ನಲ್ಲಿ ಪರಿಸ್ಥಿತಿ ವೀಕ್ಷಿಸಿದ ಶಾಸಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement