ಬ್ಲ್ಯೂ ಜೀನ್ಸ್ ‘ ಧರಿಸಿದ್ದ ಹುಡುಗಿಯಿಂದ ಹನಿಟ್ರ್ಯಾಪ್ ಗೆ ಯತ್ನ ; ಮಾಹಿತಿ ಬಿಚ್ಚಿಟ್ಟ ಸಚಿವ ರಾಜಣ್ಣ

ತುಮಕೂರು: ಸಚಿವರು, ಶಾಸಕರನ್ನು ‘ಹನಿಟ್ರ್ಯಾಪ್ ‘ಗೆ ಬೀಳಿಸಿ ನಂತರ ಬ್ಲ್ಯಾಕ್‌ ಮೇಲ್‌ ಮಾಡಲು ಯತ್ನಿಸುವ ವಿಚಾರ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮಧ್ಯೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಂಗಳವಾರ ಮತ್ತಷ್ಟು ಸಂಗತಿ ಬಹಿರಂಗಪಡಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ಎರಡು ಬಾರಿ ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದು, ಹನಿಟ್ರ್ಯಾಪ್ ಮಾಡಲು ಬಂದವಳು ಬ್ಲೂ ಜೀನ್ಸ್ ಧರಿಸಿ ಬಂದಿದ್ದಳು ಎಂಬ ಕುತೂಹಲಕಾರಿ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.
ಎರಡು ಬಾರಿ ಯತ್ನಿಸಿದಾಗಲೂ ಹುಡುಗಿಯರು ಬೇರೆ ಬೇರೆ ಆಗಿದ್ದರು. ಆದರೆ ಎರಡು ಬಾರಿಯೂ ಒಬ್ಬನೇ ಹುಡುಗ ಬಂದಿದ್ದ ಎಂದು ಹೇಳಿದ್ದಾರೆ.

ಹನಿಟ್ರ್ಯಾಪ್ ಮಾಡಲು ನನ್ನ ಮನೆಗೆ ಎರಡು ಸಲ ಒಬ್ಬನೇ ಹುಡುಗ ಎರಡು ಬಾರಿ ಹುಡುಗಿಯರನ್ನು ಕರೆದುಕೊಂಡು ಬಂದಿದ್ದ. ಆದರೆ, ಎರಡು ಬಾರಿಯೂ ಬೇರೆ ಬೇರೆ ಹುಡುಗಿಯರು ಇದ್ದರು. ಎರಡನೇ ಬಾರಿ ಬಂದಾಗ ಲಾಯರ್ ಎಂದು ಹೇಳಿದ್ದಳು. ಮೊದಲ ಬಾರಿ ಬಂದಾಗ ಹೈಕೋರ್ಟ್‌ ಲಾಯರ್ ಎಂದು ಹೇಳಿದ್ದರು. ಪರ್ಸನಲ್ ಆಗಿ ಮಾತನಾಡಬೇಕು ಎಂದು ಹೇಳಿದ್ದಳು ಎಂದು ತಿಳಿಸಿದರು.
ಮನಯಲ್ಲಿ ಸಿಸಿಟಿವಿ ಇರಲಿಲ್ಲ. ಹಾಗಾಗಿ ಸಿಸಿಟಿವಿ ವೀಡಿಯೊ ನಮ್ಮ ಬಳಿ ಇಲ್ಲ. ಯಾರು ಬಂದು ಹೋಗಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದೇನೆ. ಪೋಟೋ ತೋರಿಸಿದ್ರೆ ಗುರುತು ಹಿಡಿಯುತ್ತೇನೆ ಎಂದು ಹೇಳಿದ್ದಾರೆ

ಪ್ರಮುಖ ಸುದ್ದಿ :-   ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್‌ ಸೋಂಕಿತ ವ್ಯಕ್ತಿ ಸಾವು

ಗೃಹ ಸಚಿವರಿಗೆ ದೂರು ಸಲ್ಲಿಕೆ
ಹಲವು ಕಾರ್ಯಕ್ರಮಗಳಲ್ಲಿ ಬ್ಯುಸಿ ಇದ್ದ ಕಾರಣ ದೂರು ನೀಡಿರಲಿಲ್ಲ. ಇಂದು ದೂರು ನೀಡುತ್ತೇನೆ. ಇಂದು ಬೆಳಿಗ್ಗೆಯಿಂದ ಕುಳಿತು ಮೂರು ಪುಟಗಳ ದೂರು ಬರೆದಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಎಲ್ಲೇ ಇದ್ದರೂ ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ. ದೂರು ನೀಡಿದ ಬಳಿಕ ಎಫ್ ಐಆರ್ ಆಗುತ್ತದೆ. ಆಗ ದಾಖಲೆಗಳು ಬಹಿರಂಗವಾಗುತ್ತವೆ ಎಂದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement