ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪುರಂದರ ದಾಸರ ಉಕ್ಕಿಯನ್ನು ಉಲ್ಲೇಖಿಸಿ ಬಿಜೆಪಿಗೆ ಮಾರ್ಮಿಕವಾಗಿ ಟಾಂಗ್ ನೀಡಿದ್ದಾರೆ.
ಹೈ ಕಮಾಂಡ್‌ನಿಂದ ಉಚ್ಚಾಟನೆ ಆದೇಶ ಹೊರಬಿದ್ದ ನಂತರ ಪ್ರತಿಕ್ರಿಯಿಸಿರುವ ಅವರು, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ ಎಂದು ಪುರಂದರ ದಾಸರ ಹೇಳಿದ್ದಾರೆ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ. ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ. ಸತ್ಯವಂತರಿಗಿದು ಕಾಲವಲ್ಲ ಎಂದು ಪುರಂದರ ದಾಸರು ಭಜನೆಯನ್ನು ಹೇಳಿದ್ದನ್ನು ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ವಂಶಪಾರಂಪರ್ಯ ರಾಜಕಾರಣ, ಭ್ರಷ್ಟಾಚಾರ ವಿರುದ್ಧ ಮಾತನಾಡಿದ, ಏಕವ್ಯಕ್ತಿ ಧೋರಣೆ ತೆಗೆದುಹಾಕಿ, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಮನವಿ ಮಾಡಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಉಚ್ಚಾಟಿಸಿದೆ. ನೇರ ನಿಷ್ಠುರವಾಗಿ ಮಾತನಾಡಿದ್ದಕ್ಕೆ ಪಕ್ಷವು ನನಗೆ ಈ ಬಹುಮಾನ ನೀಡಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ ಎಂದು ಅವರು ಹೇಳಿದ್ದಾರೆ.
ನನ್ನನ್ನು ಅಮಾನತುಗೊಳಿಸುವ ನಿರ್ಧಾರದಿಂದ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಮತ್ತು ಉತ್ತರ ಕರ್ನಾಟಕದ ಅಭಿವೃದ್ಧಿ, ಹಿಂದುತ್ವದ ಪರ ನನ್ನ ಹೋರಾಟಕ್ಕೆ ಅಡ್ಡಿಯಾಗುವುದಿಲ್ಲ. ನಾನು ಅದೇ ಹುರುಪು ಮತ್ತು ದೃಢತೆಯಿಂದ ಜನ ಸೇವೆ ಮುಂದುವರಿಸುತ್ತೇನೆ. ಎಲ್ಲಾ ಕಾರ್ಯಕರ್ತರು, ಹಿತೈಷಿಗಳು, ಸ್ನೇಹಿತರು, ಪರಿಚಿತರು, ಸ್ವಾಮೀಜಿಗಳು, ಮಾಧ್ಯಮಗಳು, ನನ್ನ ಕುಟುಂಬಕ್ಕೆ ಮತ್ತು ಭಗವಂತನಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ಇದನ್ನು ಬರೆಯುತ್ತಿರುವಾಗ, ಪುರಂದರ ದಾಸರು ಹೇಳಿದ್ದನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ ಎಂದು ಹೇಳಿರುವ “ಸತ್ಯವಂತರಿಗಿದು ಕಾಲವಲ್ಲ” ಎಂದು ಪುರಂದರ ದಾಸರಕೀರ್ತನೆಯನ್ನು ಸ್ಮರಿಸಿದ್ದಾರೆ.
ಬಿಜೆಪಿಯಿಂದ ಯತ್ನಾಳ ಉಚ್ಚಾಟನೆ
ಪಕ್ಷದ ಶಿಸ್ತು ಉಲ್ಲಂಘನೆ ಹಾಗೂ ರಾಜ್ಯ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದಕ್ಕಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರನ್ನು ಪಕ್ಷವು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಈ ಹಿಂದೆ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಸಮರ್ಪಕ ಉತ್ತರ ನೀಡದ ಕಾರಣ ಯತ್ನಾಳ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ