ಕರ್ನಾಟಕದ ವಿವಿಧೆಡೆ ಐದು ದಿನಗಳ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡು ಜಿಲ್ಲೆಗಳಾದ ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಚದುರಿದ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಅಲ್ಲದೇ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ. ರಾಜ್ಯದ ಪಶ್ಚಿಮ ಕರಾವಳಿಯಲ್ಲಿ ವಿಶೇಷವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್‌ 31ರವರೆಗೆ ಅಲ್ಲಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಮಂಗಳೂರು : ಬಾಲಕರಿಗೆ ಲೈಂಗಿಕ ಕಿರುಕುಳದ ಆರೋಪ: ಚರ್ಚ್‌ ಪಾದ್ರಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement