ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ದೊಡ್ಡ ಶಾಕ್ ನೀಡಿದ್ದು, ನಂದಿನಿ ಹಾಲಿನ (Nandini milk) ದರ ಪ್ರತಿ ಲೀಟರ್ಗೆ 4 ರೂಪಾಯಿ ಏರಿಕೆ (Milk Price Hike) ಮಾಡಲು ನಿರ್ಧರಿಸಿದೆ.
ಇಂದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಎಂಎಫ್ (KMF) ನಂದಿನಿ ಹಾಲಿನ ದರ ಪ್ರತಿ ಲೀಟರಿಗೆ 4 ರೂ. ಏರಿಕೆಗೆ ಅನುಮೋದನೆ ನೀಡಿದೆ. . ಇದೇ ಏಪ್ರಿಲ್ 1ರಿಂದ ಪರಿಷ್ಕೃತ ದರ ಜಾರಿ ಬರಲಿದೆ.
ಈ ಕುರಿತು ಮಾ.24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರಕಾರಿ ನಿವಾಸ ಕಾವೇರಿಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಅಧ್ಯಕ್ಷ, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ್ದರು. ಈಗ ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು 4 ರೂ. ಗೆ ಹೆಚ್ಚಳ ಮಾಡಲಾಗಿದೆ.
ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್ಗೆ 2 ರೂ ಏರಿಕೆ ಮಾಡಲಾಗಿತ್ತು.
ಹೈನುಗಾರಿಕೆಯ ಖರ್ಚು ವೆಚ್ಚಗಳ ಹೆಚ್ಚಳದಿಂದಾಗಿ ಹಾಲಿನ ಬೆಲೆ ಏರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹಾಲಿನ ದರ ಹೆಚ್ಚಿಸದಿದ್ದರೆ ಜಿಲ್ಲಾ ಹಾಲು ಒಕ್ಕೂಟಗಳು ನಷ್ಟ ಅನುಭವಿಸಬೇಕಾಗುತ್ತದೆ. ಮತ್ತೊಂದೆಡೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಇತರೆ ಬ್ರ್ಯಾಂಡ್ಗಳ ಹಾಲಿನ ದರಕ್ಕೆ ಹೋಲಿಸಿದರೆ ರಾಜ್ಯದ ನಂದಿನಿ ಹಾಲಿನ ಬೆಲೆ ತುಂಬಾ ಕಡಿಮೆಯಿದೆ, ಹೀಗಾಗಿ ಹಾ;ಇನ ದರ ಹೆಚ್ಚಿಸಬೇಕು ಎಂದು ಪ್ರಸ್ತಾಪ ಸಲ್ಲಿಸಲಾಗಿತ್ತು. ಎಂದು ಪ್ರಸ್ತಾಪ ಸಲ್ಲಿಸಲಾಗಿತ್ತು.
ನೀಲಿ ಪ್ಯಾಕೆಟ್ ಹಾಲು – 44 ರೂ.ದಿಂದ 48 ರೂ. ಏರಿಕೆ(ಪ್ರತಿ ಲೀಟರ್ಗೆ).
ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ.
ಸಮೃದ್ಧಿ ಹಾಲಿನ ಪ್ಯಾಕೆಟ್: 56 ರೂ. ನಿಂದ 60 ರೂ.
ಗ್ರೀನ್ ಸ್ಪೇಷಲ್ ಹಾಲು: 54 ರೂ. ನಿಂದ 58 ರೂ.
ನಾರ್ಮಲ್ ಗ್ರೀನ್ ಹಾಲು: 52 ರೂ. ನಿಂದ 56 ರೂ.
ನಿಮ್ಮ ಕಾಮೆಂಟ್ ಬರೆಯಿರಿ