ಮುಡಾ ಹಗರಣ | ಇ.ಡಿ ತನಿಖೆಗೆ ಹೈಕೋರ್ಟ್‌ ಅನುಮತಿ ; ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ 14 ಬದಲಿ ನಿವೇಶನ (ಈಗ ವಾಪಸ್‌ ಮಾಡಲಾಗಿದೆ) ಹಂಚಿಕೆ ಮಾಡಿದ ಸಮಯದಲ್ಲಿ ಮುಡಾ ಆಯುಕ್ತರಾಗಿದ್ದ ಡಾ. ಡಿ ಬಿ ನಟೇಶ ಅವರಿಗೆ ಜಾರಿ ನಿರ್ದೇಶನಾಲಯ (ED) ಜಾರಿ ಮಾಡಿದ್ದ ಸಮನ್ಸ್‌ ರದ್ದುಪಡಿಸಿ ಏಕಸದಸ್ಯ ಪೀಠ ಮಾಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್‌ ಬುಧವಾರ ನಿರಾಕರಿಸಿದೆ. ಆದರೆ, ಪ್ರಕರಣದಲ್ಲಿ ಇತರೆ ಆರೋಪಿಗಳ ವಿರುದ್ಧದ ತನಿಖೆಯನ್ನು ಏಕಸದಸ್ಯ ಪೀಠ ತಡೆಯಲಾಗದು ಎಂದು ಹೇಳಿದ್ದು, ತನಿಖೆಗೆ ಅನುಮತಿ ನೀಡಿದೆ.
ಇ.ಡಿಯು. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ, ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂಮಿ ಮಾರಾಟಗಾರ ದೇವರಾಜು, ಇತರರ ವಿರುದ್ಧದ  ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶನಾಲಯ ಜಾರಿ (ಇ.ಡಿ.) ದಾಖಲಿಸಿದ್ದ ಮುಡಾ ಪ್ರಕರಣದಲ್ಲಿ ಇದರಿಂದ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಬಿಎಂ ಪಾರ್ವತಿ, ಇತರರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ ಅವರಿದ್ದ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬೇಕು ಎಂಬ ಕೋರಿಕೆಯನ್ನು ಪುರಸ್ಕರಿಸಲಾಗದು. ಆದರೆ, ಪ್ರಕರಣದಲ್ಲಿ ಇತರೆ ಆರೋಪಿಗಳ ವಿರುದ್ಧದ ತನಿಖೆಯನ್ನು ನಿರ್ಬಂಧಿಸಲು ಆಗುವುದಿಲ್ಲ. ತನಿಖೆ ಮುಂದುವರಿಸಲು ಅನುಮತಿಸಲಾಗಿದೆ. ನಟೇಶ್‌ ಅವರ ಮನೆ ಜಪ್ತಿ ಮತ್ತು ಶೋಧದ ವೇಳೆ ವಶಕ್ಕೆ ಪಡೆದಿರುವ ದಾಖಲೆಗಳು ಮತ್ತು ಅವರ ಹೇಳಿಕೆ ದಾಖಲಿಸಿಕೊಂಡಿರುವುದನ್ನು ಬಾಕಿ ತನಿಖೆಗೆ ಕಾನೂನಿನ ಅನ್ವಯ ಇ ಡಿ ಬಳಕೆ ಮಾಡಿಕೊಳ್ಳಬಹುದಾಗಿದೆ” ಎಂದು ನ್ಯಾಯಾಲಯ ಆದೇಶಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಹೇಳಿದೆ.

“ನಟೇಶ ಪ್ರಕರಣ ಬಾಕಿ ಉಳಿದಿರುವುದರಿಂದ ಅವರಿಗೆ ಯಾವುದೇ ಪೂರ್ವಾಗ್ರಹ ಉಂಟಾಗುವುದಿಲ್ಲ. ಈಗಾಗಲೇ ತನಿಖೆ ಸಂಸ್ಥೆ ಮುಂದೆ ನೀಡಿರುವ ಹೇಳಿಕೆಯನ್ನು ಹಿಂಪಡೆಯಬಹುದೇ ಎಂಬ ವಿಚಾರವನ್ನು ಮೇಲ್ಮನವಿಯ ವಿಚಾರಣೆಯ ಸಂದರ್ಭದಲ್ಲಿ ವಿಸ್ತೃತ ನೆಲೆಯಲ್ಲಿ ಪರಿಗಣಿಸಬೇಕಿದೆ. ಏಕಸದಸ್ಯ ಪೀಠದ ಆದೇಶದ ಹೊರತಾಗಿ ಪಿಎಂಎಲ್‌ಎ ಅಡಿ ಕಾನೂನಿನ ಅನ್ವಯ ತನಿಖೆಗೆ ಅನುಮತಿಸಲಾಗಿದೆ. ಹೀಗಾಗಿ, ಜಾರಿ ನಿರ್ದೇಶನಾಲಯವು ಕಾನೂನಿನ ಅನ್ವಯ ತನಿಖೆ ನಡೆಸುವ ಅರ್ಹತೆ ಹೊಂದಿದೆ. ಈ ನೆಲೆಯಲ್ಲಿ ಮಧ್ಯಂತರ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ” ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರಮುಖ ಸುದ್ದಿ :-   ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement