ಹೈದರಾಬಾದ್: ತೆಲಂಗಾಣದ ರಾಜಧಾನಿ ಹೈದರಾಬಾದ್‌ನಿಂದ ಆಘಾತಕಾರಿ ಘಟನೆಯೊಂದು ಹೊರಬಿದ್ದಿದ್ದು, 21 ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬರು ಕ್ರಿಕೆಟ್ ಆಡುತ್ತಿರುವಾಗ ಕುಸಿದುಬಿದ್ದು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ, ಏಪ್ರಿಲ್ 4ರಂದು ಈ ಘಟನೆ ನಡೆದಿದ್ದು, ಆ ವಿದ್ಯಾರ್ಥಿಯನ್ನು ತೆಲಂಗಾಣದ ಖಮ್ಮಂ ಜಿಲ್ಲೆಯ ವಿನಯಕುಮಾರ ಎಂದು ಗುರುತಿಸಲಾಗಿದೆ. ಮೇಡ್ಚಲದ ಸಿಎಂಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ ವಿನಯಕುಮಾರ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ.
ಶುಕ್ರವಾರ ಸಂಜೆ ಕಾಲೇಜು ಕ್ಯಾಂಪಸ್‌ನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಡೆಕ್ಕನ್ ಕ್ರಾನಿಕಲ್ ವರದಿ ಮಾಡಿದೆ. ವಿನಯಕುಮಾರ ಅವರು ಫೀಲ್ಡಿಂಗ್ ಮಾಡುವಾಗ ಕುಸಿದು ಬಿದ್ದಿರುವುದನ್ನು ವೀಡಿಯೊ ತೋರಿಸುತ್ತದೆ.
ವೀಡಿಯೋದಲ್ಲಿ, ವಿನಯಕುಮಾರ ಅವರು ಕ್ರಿಕೆಟ್ ಮೈದಾನದಲ್ಲಿ ಕುಸಿದು ಬೀಳುವ ಕ್ಷಣಗಳ ಮೊದಲು ಸಹಜವಾಗಿ ಇದ್ದಂತೆ ತೋರುತ್ತಿದ್ದರು. ಅವರು ಕುಸಿದುಬಿದ್ದ ತಕ್ಷಣವೇ ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೆ ಅವರು ಮೃತಪಟ್ಟಿದ್ದರು.
ಪ್ರಾಥಮಿಕ ವೈದ್ಯಕೀಯ ಮೌಲ್ಯಮಾಪನಗಳು ಅವರಿಗೆ ಹೃದಯ ಸ್ತಂಭನ ಆಗಿರುವುದು ಸಾವಿಗೆ ಮುಖ್ಯ ಸಂಭವನೀಯ ಕಾರಣವೆಂದು ಸೂಚಿಸುತ್ತವೆ. ದುರಂತ ಘಟನೆಯ ಬಗ್ಗೆ ಮಾಹಿತಿ ಪಡೆದಿರುವ ವಿನಯಕುಮಾರ ಅವರ ಕುಟುಂಬವು ಘಟನೆಯ ಬಗ್ಗೆ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ
ನಿಮ್ಮ ಕಾಮೆಂಟ್ ಬರೆಯಿರಿ