ಕಲಬುರಗಿ : ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದು ಐವರು ಸಾವಿಗೀಡಾದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಇಂದು ಶನಿವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ.
ಡಿಕ್ಕಿಯಾದ ರಭಸಕ್ಕೆ ಮಿನಿ ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಒಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರನ್ನು ಮೆಹಬೂಬ್ ಗದ್ದಿನಕೇರಿ, ಮೆಹಬೂಬಿ, ವಾಜೀದ್, ಪ್ರಿಯಾಂಕಾ, ಮಹಿಬೂಬ್ ಉಸ್ಮಾನ್‌ಸಾಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತರು ಬಾಗಲಕೋಟೆಯ ನವನಗರ ನಿವಾಸಿಗಳು ಎಂದು ಹೇಳಲಾಗಿದ್ದು, ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.
ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್ನಲ್ಲಿದ್ದ. 11 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿನಿ ಬಸ್ನಲ್ಲಿ ಒಟ್ಟು ೩೧ ಜನ ಪ್ರಯಣಿಸುತ್ತಿದ್ದರು ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ