ವೀಡಿಯೊ…| ಬೆಂಗಳೂರಿನ ಬೀದಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ; ನಂತರ ಪರಾರಿ

ಬೆಂಗಳೂರು : ನಡು ರಸ್ತೆಯಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಈ ಘಟನೆಯ ವೀಡಿಯೊ ಕೂಡ ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿದೆ. ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರನ್ನು ಹಿಂಬಾಲಿಸಿ ಹತ್ತಿರ ಬರುವುದನ್ನು ವೀಡಿಯೊ ತೋರಿಸುತ್ತದೆ, ಆತ ಅವರಲ್ಲಿ ಒಬ್ಬರನ್ನು ತಬ್ಬಿಕೊಳ್ಳಲು ಹಿಡಿದುಕೊಂಡಿದ್ದು ಕ್ಷಣಗಳ ನಂತರ ಓಡಿಹೋಗಿದ್ದಾನೆ.
ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಏಪ್ರಿಲ್ 3 ರಂದು  ಸೆರೆಹಿಡಿಯಲಾದ ವೀಡಿಯೊ ಎಂದು ಹೇಳಲಾಗಿದ್ದು, ವ್ಯಕ್ತಿ ಮಹಿಳೆಯರ ಕಡೆಗೆ ಬರುವುದನ್ನು ತೋರಿಸುತ್ತದೆ. ರಸ್ತೆ ಖಾಲಿಯಾಗಿತ್ತು, ಕೆಲವು ದ್ವಿಚಕ್ರ ವಾಹನಗಳು ಒಂದು ಬದಿಯಲ್ಲಿ ನಿಂತಿದ್ದವು. ಆ ವ್ಯಕ್ತಿ ನಂತರ ಅವರಲ್ಲಿ ಒಬ್ಬಳನ್ನು ಹಿಂದಿನಿಂದ ಹಿಡಿಕೊಂಡು ಅನುಚಿತವಾಗಿ ಸ್ಪರ್ಷಿಸಿದ್ದಾನೆ. ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

https://twitter.com/i/status/1908802132238823545

ಇಂಡಿಯಾ ಟುಡೇ ವರದಿ ಪ್ರಕಾರ ಅಪರಿಚಿತ ವ್ಯಕ್ತಿಯ ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ  ಪ್ರಕರಣ ದಾಖಲಿಸಲಾಗಿದೆ.
ಆದರೆ, ಸಂತ್ರಸ್ತೆ ಇನ್ನೂ ದೂರು ದಾಖಲಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಆರೋಪಿಯ ಪತ್ತೆಗೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.
ಏತನ್ಮಧ್ಯೆ, ಆಗಸ್ಟ್ 2024 ರಲ್ಲಿ ಬೆಂಗಳೂರಿನ ಕೋಣನಕುಂಟೆ ಪ್ರದೇಶದಲ್ಲಿ ಬೆಳಗಿನ ವಾಕ್‌ ಸಮಯದಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಹಿಡಿಕೊಂಡಿದ್ದ ಇದೇ ರೀತಿಯ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಘಟನೆ ನಡೆದ ಎರಡು ದಿನಗಳ ನಂತರ ಕ್ಯಾಬ್ ಚಾಲಕನಾಗಿದ್ದ ಆರೋಪಿಯನ್ನು ಬಂಧಿಸಲಾಗಿತ್ತು.

ಪ್ರಮುಖ ಸುದ್ದಿ :-   ಪರೀಕ್ಷೆಯಲ್ಲಿ ಫೇಲ್‌ ಆದ್ರೂ 2 ವರ್ಷ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ ಮಹಿಳೆ..! ಸಬ್-ಇನ್ಸ್‌ಪೆಕ್ಟರ್ ಆಗಿ‌ ಪೋಸ್‌...!!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement