2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29 ರಿಂದ ಶಾಲೆಗಳು ಆರಂಭ, ದಸರಾ, ಬೇಸಿಗೆ ರಜೆಗಳ ಮಾಹಿತಿ ಇಲ್ಲಿದೆ…

ಬೆಂಗಳೂರು : ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು 2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇದು ಅನ್ವಯವಾಗಲಿದೆ ಎಂದು ತಿಳಿಸಿದೆ.
ಮೇ 29ರಿಂದ ಶಾಲೆಗಳು ಆರಂಭವಾಗಲಿದೆ. ಮೇ 29 ರಿಂದ ಸೆಪ್ಟೆಂಬರ್ 19 ರವರೆಗೆ ಮೊದಲ ಅವಧಿ ಹಾಗೂ ಅಕ್ಟೋಬರ್ 8 ರಿಂದ 2026 ರ ಏಪ್ರಿಲ್ 10 ರವರೆಗೆ ಎರಡನೇ ಅವಧಿಯಲ್ಲಿ ಶಾಲೆಗಳು ಕಾರ್ಯ ನಿರ್ವಹಿಸಲಿವೆ. ಸೆಪ್ಟೆಂಬರ್‌ 20 ರಿಂದ ಅಕ್ಟೋಬರ್‌ 7 ರವರೆಗೆ ದಸರಾ ರಜೆ ಮತ್ತು 2026ರ ಏಪ್ರಿಲ್ 11 ರಿಂದ ಮೇ 28 ರವರೆಗೆ ಬೇಸಿಗೆ ರಜೆ ಇರಲಿದೆ.
ಕರ್ತವ್ಯದ ದಿನಗಳು 242
ಪ್ರಸಕ್ತ ಸಾಲಿನಲ್ಲಿ 123 ದಿನಗಳು ರಜೆಯ ದಿನಗಳಾಗಿರುತ್ತವೆ. ಉಳಿದ 242 ದಿನಗಳು ಶಾಲೆ ನಡೆಯಲಿವೆ. 242 ದಿನಗಳಲ್ಲಿ ಪರೀಕ್ಷೆ ಮತ್ತು ಮೌಲ್ಯಾಂಕನ ಕಾರ್ಯಕ್ಕಾಗಿ 26 ದಿನಗಳನ್ನು ನಿಗದಿ ಮಾಡಲಾಗಿದೆ. ಪಠ್ಯೇತರ ಚಟುವಟಿಕೆ, ಪಠ್ಯ ಚಟುವಟಿಕೆ, ಸ್ಪರ್ಧೆಗಳ ನಿರ್ವಹಣಾ ಕಾರ್ಯಕ್ಕಾಗಿ 22 ದಿನ ನಿಗದಿಪಡಿಸಲಾಗಿದೆ. ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನ, ಶಾಲಾ ಸ್ಥಳೀಯ ರಜೆಗಳಿಗೆ 04 ದಿನ ಮತ್ತು ಬೋಧನಾ ಕಲಿಕಾ ಪ್ರಕ್ರಿಯೆಗೆ ಉಳಿಯುವ ಕರ್ತವ್ಯಕ್ಕೆ 178 ದಿನಗಳನ್ನು ನಿಗದಿಪಡಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement