ವೀಡಿಯೊ..| ಕಾಲೇಜಿನ ಸಮಾರಂಭದಲ್ಲಿ ಭಾಷಣ ಮಾಡುತ್ತಿರುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಮುಂಬೈ: ಮಹಾರಾಷ್ಟ್ರದ ಧಾರಶಿವ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಭಾಷಣ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವಿಗೀಡಾಗಿದ್ದಾಳೆ.
ಕುಸಿದುಬಿದ್ದ ವಿದ್ಯಾರ್ಥಿನಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಹೇಳಲಾಗಿದೆ.
ಈ ಘಟನೆಯ ವೀಡಿಯೊ ವೈರಲ್ ಆಗಿದ್ದು, ಪರಂದ ತಾಲೂಕಿನ ಮಹರ್ಷಿ ಗುರುವರ್ಯ ಆರ್.ಜಿ.ಶಿಂಧೆ ಮಹಾವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಯಾವ ದಿನ ನಡೆದಿದೆ ಎಂಬುದು ತಿಳಿದುಬಂದಿಲ್ಲ.

ವೀಡಿಯೋದಲ್ಲಿ ವರ್ಷಾ ಖಾರತ್ ಎಂದು ವಿದ್ಯಾರ್ಥಿನಿ ತನ್ನ ಕಾಲೇಜಿನ ಸಮಾರಂಭದಲ್ಲಿ ಮರಾಠಿಯಲ್ಲಿ ಭಾಷಣ ಮಾಡುತ್ತಿರುವುದನ್ನು ನೋಡಬಹುದು. ಕುಸಿದು ಬೀಳುವ ಕ್ಷಣಗಳ ಮೊದಲು ನಗುತ್ತಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವುದನ್ನು ತೋರಿಸುತ್ತದೆ. ಭಾಷಣದ ಮಧ್ಯೆ ಮತ್ತು ಪ್ರೇಕ್ಷಕರು ನಗಲು ಪ್ರಾರಂಭಿಸಿದರು. ನಂತರ ಖಾರತ್ ಮಾತು ಕ್ರಮೇಣ ನಿಧಾನವಾಗಿ ತಕ್ಷಣವೇ ನೆಲದ ಮೇಲೆ ಕುಸಿದುಬಿದ್ದಿದ್ದಾಳೆ. ನಂತರ ಸಭಿಕರಲ್ಲಿ ಕೆಲವರು ತಕ್ಷಣವೇ ಅವಳ ಕಡೆಗೆ ಧಾವಿಸಿದ್ದಾರೆ. ವಿದ್ಯಾರ್ಥಿನಿಯನ್ನು ತಕ್ಷಣವೇ ಆಸ್ಪತ್ರೆಗೆ ಒಯ್ದರೂ ಪ್ರಯೋಜನವಾಗಲಿಲ್ಲ ಎಂದು ಹೇಳಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವರ್ಷಾ ಅವರು 8 ವರ್ಷದವಳಿದ್ದಾಗ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಆದರೆ ಕಳೆದ ಹನ್ನೆರಡು ವರ್ಷಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ ಮತ್ತು ಯಾವುದೇ ಔಷಧಿ ಸೇವಿಸಿರಲಿಲ್ಲ ಎಂದು ಹೇಳಲಾಗಿದೆ.
ವರ್ಷಾ ಅವರ ನಿಧನಕ್ಕೆ ಕಾಲೇಜು ಆಡಳಿತ ಮಂಡಳಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಒಂದು ದಿನದ ರಜೆ ಘೋಷಿಸಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಬಳಿ ಯುವತಿಗೆ ಕಿರುಕುಳ ನೀಡಿ, ಹಲ್ಲೆಗೈದ ಗ್ಯಾಂಗ್ ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement