ನಾಳೆ (ಏ.8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಈ ವೆಬ್‌ಸೈಟ್‌ಗಳಲ್ಲಿ ರಿಸಲ್ಟ್ ನೋಡಬಹುದು…

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಫಲಿತಾಂಶ ನಾಳೆ (ಏಪ್ರಿಲ್‌  8) ಮಂಗಳವಾರ ಮಧ್ಯಾಹ್ನ 12:30ಕ್ಕೆ ಪ್ರಕಟವಾಗಲಿದೆ. . ಕೆಎಸ್ಇಎಬಿ ಕರ್ನಾಟಕ ಮಂಡಳಿಯ 12ನೇ ತರಗತಿಯ ಪರೀಕ್ಷಾ ಫಲಿತಾಂಶ 2025 ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುದ್ದಿಗೋಷ್ಠಿ ನಡೆಯಲಿದೆ. ನಂತರ ಮಂಗಳವಾರ ಮಧ್ಯಾಹ್ನ 1:30ರ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ.
ದ್ವಿತೀಯ ಪಿಯು ಪರೀಕ್ಷೆ ರಾಜ್ಯಾದ್ಯಂತ ಮಾರ್ಚ್ 1ರಿಂದ ಮಾರ್ಚ್ 20 ರವರೆಗೆ ನಡೆದಿತ್ತು. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕರ್ನಾಟಕ ಮಂಡಳಿಯು ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ನಡೆಸಿತು. ಕರ್ನಾಟಕ ಮಂಡಳಿಯ 12ನೇ ತರಗತಿ ಪರೀಕ್ಷೆಯ ನಂತರ, ಮಾರ್ಚ್ 21 ರಂದು ವಿದ್ಯಾರ್ಥಿಗಳಿಗೆ ಉತ್ತರದ ಕೀಲಿಯನ್ನು ಲಭ್ಯವಾಗುವಂತೆ ಮಾಡಲಾಯಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಬಳಿಕ ಈ ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಹಾಗೂ ಅಂಕಪಟ್ಟಿಯನ್ನು ಡೌನ್‌ಲೋಡ್‌ ಕೂಡ ಮಾಡಿಕೊಳ್ಳಬಹುದಾಗಿದೆ.
ಫಲಿತಾಂಶ ಪರಿಶೀಲಿಸುವುದು ಹೇಗೆ?
– ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
– ಮುಖಪುಟದಲ್ಲಿ ಪಿಯು II ಪರೀಕ್ಷೆ 1 ಫಲಿತಾಂಶ ಪುಟಕ್ಕೆ ಹೋಗಿ.
-ಹೋಂ ಪೇಜ್‌ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
– ರೆಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.
– Second PU Results 2025 ಎಂಬುದು ಸ್ಕ್ರೀನ್‌ನಲ್ಲಿ ಕಾಣಿಸುತ್ತದೆ.
-KSEAB 2nd PUC ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡಿ.

ಪ್ರಮುಖ ಸುದ್ದಿ :-   ಶಿರಸಿ-ಕುಮಟಾ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement