ಏಪ್ರಿಲ್ 8, 9ರಂದು ಗುಜರಾತಿನಲ್ಲಿ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧಿವೇಶನ

ನವದೆಹಲಿ: ಮಂಗಳವಾರ(ಏಪ್ರಿಲ್‌ 8)ದಿಂದ ಗುಜರಾತಿನ ಅಹಮದಾಬಾದ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನಕ್ಕೆ ಕಾಂಗ್ರೆಸ್ ಸಜ್ಜಾಗುತ್ತಿದೆ.
ಏಪ್ರಿಲ್ 8 ಮತ್ತು 9 ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯಲಿರುವ ಎರಡು ದಿನಗಳ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನದಲ್ಲಿ ಕಾಂಗ್ರೆಸ್ 2027 ರಲ್ಲಿ ಗುಜರಾತಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಗುಜರಾತ್‌ನ ಇಬ್ಬರು ಪಕ್ಷದ ಪ್ರಮುಖರಾದ ಮಹಾತ್ಮ ಗಾಂಧಿ ಮತ್ತು ವಲ್ಲಭಭಾಯಿ ಪಟೇಲ್ ಅವರೊಂದಿಗಿನ ತನ್ನ ಸಂಬಂಧದ ನೆನಪುಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸಲಿದೆ. 1995 ರಿಂದ ಗುಜರಾತ್‌ನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲ.. 1998 ರಿಂದ, ಗುಜರಾತಿನಲ್ಲಿ ಬಿಜೆಪಿ ನಿರಂತರ ಆಡಳಿತ ನಡೆಸುತ್ತಿದೆ.

“ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಏಪ್ರಿಲ್ 8 ರಂದು ಅಹಮದಾಬಾದ್‌ನಲ್ಲಿರುವ ಸರ್ದಾರ್ ವಲ್ಲಭಭಾಯಿ ರಾಷ್ಟ್ರೀಯ ಸ್ಮಾರಕದಲ್ಲಿ ಸಭೆ ಸೇರಲಿದೆ. ಇದರಲ್ಲಿ ಪಕ್ಷದ ಅಧುಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪಕ್ಷದ ವಿವಿಧ ರಾಜ್ಯಗಳ ಅಧ್ಯಕ್ಷರು ಸಹ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಗುಜರಾತ್ ಕಾಂಗ್ರೆಸ್ ಘಟಕದ ಮುಖ್ಯಸ್ಥ ಶಕ್ತಿಸಿನ್ಹ ಗೋಹಿಲ್ ಹೇಳಿದ್ದಾರೆ.
ಕಾಂಗ್ರೆಸ್‌ ಕಾರ್ಯಕಾರಿಯ ಸಭೆಯ ನಂತರ, ಪಕ್ಷದ ನಾಯಕರು ಸಂಜೆ ನಗರದ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸುತ್ತಾರೆ ಮತ್ತು ಅಲ್ಲಿ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸುತ್ತಾರೆ. ಏಪ್ರಿಲ್ 9 ರಂದು ಸಬರಮತಿ ನದಿ ದಂಡೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿವೇಶನ ನಡೆಯಲಿದೆ.

ಪ್ರಮುಖ ಸುದ್ದಿ :-   ಬಹುಭಾಷಾ ನಟ ಮುಕುಲ್‌ ದೇವ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement