ಮಸೂದೆಗಳನ್ನು ತಡೆಹಿಡಿಯಲು ರಾಜ್ಯಪಾಲರಿಗೆ ವಿಟೋ ಅಧಿಕಾರವಿಲ್ಲ : ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್‌ ತರಾಟೆ

ಬೆಂಗಳೂರು : ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಗಳನ್ನು ತಡೆಹಿಡಿದು ಕೂಡ್ರಲು ಇರುವುದಕ್ಕೆ ರಾಜ್ಯಪಾಲರಿಗೆ ಯಾವುದೇ ರೀತಿಯ ವಿಟೋ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.
ತಮಿಳುನಾಡು ಶಾಸಕಾಂಗವು ಮಂಡಿಸಿದ 10 ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರಗಳು ಕಾನೂನುಬಾಹಿರ ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್.ಮಹಾದೇವನ್ ಅವರ ಪೀಠ ಹೇಳಿತು.
ರಾಜ್ಯ ವಿಧಾನಸಭೆಯು ಮಸೂದೆಗಳನ್ನು ಮರುಪರಿಶೀಲಿಸಿದ ನಂತರ ರಾಜ್ಯಪಾಲರು ಮಂಡಿಸಿದಾಗ ಅದಕ್ಕೆ ಒಪ್ಪಿಗೆ ನೀಡಬೇಕು. ಮಸೂದೆ ವಿಭಿನ್ನವಾಗಿದ್ದಾಗ ಮಾತ್ರ ಅವರು ಒಪ್ಪಿಗೆ ನಿರಾಕರಿಸಬಹುದು ಎಂದು ಅದು ಸ್ಪಷ್ಟಪಡಿಸಿತು.
“ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಹತ್ತು ಮಸೂದೆಗಳನ್ನು ಅಂಗೀಕರಿಸದೆ ಇರುವ ರಾಜ್ಯಪಾಲರ ಕ್ರಮ ಕಾನೂನುಬಾಹಿರ ಮತ್ತು ನಿರಂಕುಶತೆಯಿಂದ ಕೂಡಿರುವಂಥದ್ದು. ಆದ್ದರಿಂದ ಈ ಕ್ರಮ ರದ್ದುಗೊಳಿಸಲಾಗಿದೆ. 10 ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರು ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ರದ್ದುಗೊಳಿಸಲಾಗಿದೆ” ಎಂದು ಪೀಠ ಹೇಳಿತು.

ರಾಷ್ಟ್ರಪತಿಗಳ ಮುಂದೆ 10 ಮಸೂದೆಗಳನ್ನು ಕಾಯ್ದಿರಿಸಿರುವ ರಾಜ್ಯಪಾಲರ ಕ್ರಮ ಕಾನೂನುಬಾಹಿರ. ಹಾಗಾಗಿ, ಈ ಕ್ರಮವನ್ನು ರದ್ದುಗೊಳಿಸಲಾಗಿದೆ. 10 ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರು ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯಪಾಲರೆದುರು 10 ಮಸೂದೆಗಳನ್ನು ಮರಳಿ ಇರಿಸಿದ ದಿನವೇ ಅದಕ್ಕೆ ಅನುಮೋದನೆ ದೊರೆತಿದೆ ಎಂದು ಪರಿಗಣಿಸಲಾಗುತ್ತದೆ ” ಎಂದು ನ್ಯಾಯಾಲಯ ಹೇಳಿತು.
ವಿಧಾನಸಭೆ ಅಂಗೀಕರಿಸಿದ ವಿವಿಧ ಮಸೂದೆಗಳಿಗೆ ರಾಜ್ಯಪಾಲ ರವಿ ಅವರು ಒಪ್ಪಿಗೆ ನೀಡಲು ನಿರಾಕರಿಸಿದ್ದರ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.
ವಿಧಾನಸಭೆ ಅಂಗೀಕರಿಸಿದ ಮಸೂದೆಗಳ ಬಗ್ಗೆ ರಾಜ್ಯಪಾಲರು ನಿರ್ಧರಿಸಲು ಕಾಲಮಿತಿಯನ್ನೂ ನ್ಯಾಯಾಲಯ ನಿಗದಿಪಡಿಸಿತು. ಕಾಲಮಿತಿ ಪಾಲಿಸದಿದ್ದರೆ ರಾಜ್ಯಪಾಲರ ನಿಷ್ಕ್ರಿಯತೆ ನ್ಯಾಯಾಲಯಗಳ ನ್ಯಾಯಾಂಗ ಪರಿಶೀಲನೆಗೆ ಒಳಪಡುತ್ತದೆ ಎಂದು ಎಚ್ಚರಿಕೆ ನೀಡಿತು.

ಪ್ರಮುಖ ಸುದ್ದಿ :-   ವೀಡಿಯೊ..| ಭಾರತದ 20 ನಗರಗಳ ಮೇಲೆ ಪಾಕಿಸ್ತಾನದಿಂದ ಡ್ರೋನ್ ದಾಳಿ ;ಎಲ್ಲವನ್ನೂ ಹೊಡೆದುರುಳಿಸಿದ ಸೇನೆ...

ತಮಿಳುನಾಡು ರಾಜ್ಯವನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ ಮನು ಸಿಂಘ್ವಿ, ಮುಕುಲ್ ರೋಹಟಗಿ, ರಾಕೇಶ್ ದ್ವಿವೇದಿ ಮತ್ತು ಪಿ ವಿಲ್ಸನ್ ವಾದ ಮಂಡಿಸಿದ್ದರು. ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ತಮಿಳುನಾಡು ರಾಜ್ಯಪಾಲರನ್ನು ಪ್ರತಿನಿಧಿಸಿದ್ದರು.
ದೇಶದ ವಿವಿಧ ರಾಜ್ಯಗಳ ರಾಜ್ಯಪಾಲರು ಚುನಾಯಿತ ಸರ್ಕಾರಗಳನ್ನು ಮೂಲೆಗೆ ಸರಿಸುವ ಪ್ರವೃತ್ತಿಯನ್ನು ನ್ಯಾಯಾಲಯ ಟೀಕಿಸಿತು. ರಾಜ್ಯಪಾಲರು ಸಂಸದೀಯ ಪ್ರಜಾಪ್ರಭುತ್ವದ ಸ್ಥಾಪಿತ ರೂಢಿಗಳನ್ನು ಗೌರವಿಸಬೇಕು. ಶಾಸಕಾಂಗದ ಮೂಲಕ ವ್ಯಕ್ತವಾಗುವ ಜನರ ಇಚ್ಛೆಯನ್ನು ಗೌರವಿಸಬೇಕು ಮತ್ತು ಜನರಿಗೆ ಜವಾಬ್ದಾರರಾಗಿರುವ ಚುನಾಯಿತ ಸರ್ಕಾರಕ್ಕೆ ಗೌರವ ನೀಡಬೇಕು ಎಂದು ಹೇಳಿತು. ರಾಜ್ಯಪಾಲರು ವಿಧಾನಸಭೆಯ ಮಿತ್ರ, ತತ್ವಜ್ಞಾನಿ ಮತ್ತು ಮಾರ್ಗದರ್ಶಕನ ಪಾತ್ರವನ್ನು ನಿರ್ಲಿಪ್ತತೆಯಿಂದ ನಿರ್ವಹಿಸಬೇಕು ಎಂದು ಹೇಳಿತು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement