ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result)ವನ್ನು ಪ್ರಕಟಿಸಿದೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ.
ಉಡುಪಿ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ (Amoolya Kamath) ಮೊದಲ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡದ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ (Deepashree) ಗೆ ಮೊದಲ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದು, ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ.
ಪರೀಕ್ಷೆಗೆ ಕುಳಿತ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ.
ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದು, ಆ ಪೈಕಿ 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ. 3,45,694 ಬಾಲಕಿಯರು ಪರೀಕ್ಷೆ ಬರೆದಿದ್ದರು ಅದರಲ್ಲಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ.
ಜಿಲ್ಲಾವಾರು ಫಲಿತಾಂಶ
ಉಡುಪಿ ಜಿಲ್ಲೆ ಶೇಕಡಾ 93.90%, ದಕ್ಷಿಣ ಕನ್ನಡ ಜಿಲ್ಲೆ 93.57%, ಬೆಂಗಳೂರು ದಕ್ಷಿಣ 85.36%, ಕೊಡಗು ಜಿಲ್ಲೆ 83.84%ರಷ್ಟು ಫಲಿತಾಂಶ, ಬೆಂಗಳೂರು ಉತ್ತರ 83.31%, ಉತ್ತರ ಕನ್ನಡ ಜಿಲ್ಲೆ 82.93%ರಷ್ಟು ಫಲಿತಾಂಶದೊಂದಿಗೆ ಐದನೇ ಸ್ಥಾನದಲ್ಲಿದೆ.
ಶಿವಮೊಗ್ಗ ಜಿಲ್ಲೆ 79.91%, ಬೆಂಗಳೂರು ಗ್ರಾಮಾಂತರ ಜಿಲ್ಲೆ 79.70%, ಚಿಕ್ಕಮಗಳೂರು ಜಿಲ್ಲೆ 79.56%, ಹಾಸನ ಜಿಲ್ಲೆ 77.56%ರಷ್ಟು ಫಲಿತಾಂಶ, ಚಿಕ್ಕಬಳ್ಳಾಪುರ ಜಿಲ್ಲೆ 75.80%, ಮೈಸೂರು ಜಿಲ್ಲೆ 74.30%ರಷ್ಟು ಫಲಿತಾಂಶ, ಚಾಮರಾಜನಗರ ಜಿಲ್ಲೆ 73.97%, ಮಂಡ್ಯ ಜಿಲ್ಲೆ 73.27%ರಷ್ಟು ಫಲಿತಾಂಶ, ಬಾಗಲಕೋಟೆ ಜಿಲ್ಲೆ 72.83%, ಕೋಲಾರ ಜಿಲ್ಲೆ 72.45%, ಧಾರವಾಡ ಜಿಲ್ಲೆ 72.32%, ತುಮಕೂರು ಜಿಲ್ಲೆ 72.02%ರಷ್ಟು ಫಲಿತಾಂಶ, ರಾಮನಗರ ಜಿಲ್ಲೆ 69.71%, ದಾವಣಗೆರೆ ಜಿಲ್ಲೆ 69.45%, ಹಾವೇರಿ ಜಿಲ್ಲೆ 76.56%, ಬೀದರ್ ಜಿಲ್ಲೆ 67.31%, ಕೊಪ್ಪಳ ಜಿಲ್ಲೆ 67.20%, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 66.76%, ಗದಗ ಜಿಲ್ಲೆ 66.64%, ಬೆಳಗಾವಿ ಜಿಲ್ಲೆ 65.37%, ಬಳ್ಳಾರಿ ಜಿಲ್ಲೆ 64.41%, ಚಿತ್ರದುರ್ಗ ಜಿಲ್ಲೆ 59.87%, ವಿಜಯಪುರ ಜಿಲ್ಲೆ 58.81%, ರಾಯಚೂರು ಜಿಲ್ಲೆ 58.75%, ಕಲಬುರಗಿ ಜಿಲ್ಲೆ 55.70%, ಯಾದಗಿರಿ ಜಿಲ್ಲೆ 48.45%ರಷ್ಟು ಫಲಿತಾಂಶ ಬಂದಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು karresults.nic.inನಲ್ಲಿ ಮಧ್ಯಾಹ್ನ ವೀಕ್ಷಿಸಬಹುದು.
ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಮತ್ತು karresults.nic.in ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಮೂಲಕ ವೀಕ್ಷಿಸಬಹುದು.
ಫಲಿತಾಂಶದ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಹಾಗೂ ಪರೀಕ್ಷೆ – 3 ರ ಬರೆಯಲು ಅವಕಾಶವಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ
ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು SMS ಮತ್ತು ಡಿಜಿಲಾಕರ್ ಮೂಲಕವೂ ಪಡೆಯಬಹುದು.
2025ರ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್ 20ರವರೆಗೆ ನಡೆದಿತ್ತು.
ಕಳೆದ ವರ್ಷ ಶೇಕಡಾ 81.15% ಫಲಿತಾಂಶ ಬಂದಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ